ಬಳ್ಳಾರಿ: ಆಕಸ್ಮಿಕ ಬೆಂಕಿ ತಗುಲಿ ಸಂಪೂರ್ಣ ಮನೆ ಸುಟ್ಟು ಕರಕಲಾದ ಘಟನೆ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಮಾಲ್ವಿ ಗ್ರಾಮದಲ್ಲಿ ನಡೆದಿದೆ.
ಬಯಲು ಪತ್ತಾರ ಗಂಗಮ್ಮ ಎಂಬುವವರ ಹಂಚಿನ ಮನೆಗೆ ಬೆಂಕಿ ತಗುಲಿದೆ. ಮನೆಯಲ್ಲಿ ಯಾರೂ ಇಲ್ಲದಿದ್ದರಂದ ಯಾವುದೇ ಜೀವಹಾನಿಯಾಗಿಲ್ಲ. ಗ್ಯಾಸ್ ಸೋರಿಕೆಯಿಂದ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ.