ಬಳ್ಳಾರಿ: ಅಕಸ್ಮಿಕ ಅಗ್ನಿ ಅವಘಡಕ್ಕೆ ಸಾವಿರಾರು ಅಡಕೆ ಮರಗಳು ಸುಟ್ಟು ಭಸ್ಮವಾಗಿರುವ ಘಟನೆಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಾನಾಹೊಸಹಳ್ಳಿಸಮೀಪದ ಓಬಳಶೆಟ್ಟಿಹಳ್ಳಿಯಲ್ಲಿ ನಡೆದಿದೆ.
ಅಟವಾಳಿಗೆ ಸಾಕಮ್ಮ ಎನ್ನುವರಿಗೆ ಸೇರಿದ ಒಂದುವರೆ ಎಕರೆ ಅಡಕೆ ಮರಗಳು ಸುಟ್ಟು ಹೋಗಿದ್ದು, ಲಕ್ಷಾಂತರ ರೂ. ನಷ್ಟವಾಗಿದೆ.
ಬೆಂಕಿ ನಂದಿಸಲು ಸ್ಥಳೀಯರು ಹರಸಾಹಸ ಪಟ್ಟರೂ ಹತೋಟಿಗೆ ಬಾರದ ಕಾರಣ ಅಗ್ನಿಶಾಮಕ ವಾಹನ ಬಂದು ಬೆಂಕಿ ನಂದಿಸಿ ಹೆಚ್ಚಿನ ನಷ್ಟವನ್ನು ತಪ್ಪಿಸಿದ್ದಾರೆ.