ಬಳ್ಳಾರಿ: ನಗರದ ರಾಯಲ್ ವೃತ್ತದಲ್ಲಿ ಇಂದು ಪೌರತ್ವ ತಿದ್ದುಪಡಿ ಕಾಯಿದೆ ಮತ್ತು 144 ಸೆಕ್ಷನ್ ಜಾರಿಯನ್ನು ವಿರೋಧಿಸಿ ಸಿಪಿಐ ಮತ್ತು ಸಿಪಿಎಂ ಪಕ್ಷದ ಸದಸ್ಯರು ಪ್ರತಿಭಟನೆ ಮಾಡಿದರು.
ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಡಿವೈಎಸ್ಪಿ ರಾಮ್ರಾವ್ ನೇತೃತ್ವದ ತಂಡ ಭೇಟಿ ನೀಡಿ, 50ಕ್ಕೂ ಹೆಚ್ಚಿನ ಸದಸ್ಯರನ್ನು ವಶಕ್ಕೆ ಪಡೆಯಲಾಗಿದೆ.