ರಾಮನಗರ: ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್ನಲ್ಲಿ ಶಾಸಕರ ನಡುವಿನ ಹೊಡೆದಾಟ ಪ್ರಕರಣ ಸಂಬಂಧ ಇಂದು ಕಂಪ್ಲಿ ಗಣೇಶ್ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಬಿಡದಿ ಬಳಿಯ ಈಗಲ್ಟನ್ ರೆಸಾರ್ಟ್ನಲ್ಲಿ ಜ.19ರ ರಾತ್ರಿ ಕಾಂಗ್ರೆಸ್ ಶಾಸಕರು ವಾಸ್ತವ್ಯ ಹೂಡಿದ್ದ ವೇಳೆ, ಬಳ್ಳಾರಿ ಶಾಸಕ ಆನಂದ್ ಸಿಂಗ್ ಮೇಲೆ ಕಂಪ್ಲಿ ಶಾಸಕ ಗಣೇಶ್ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದರು. ಈ ಸಂಬಂಧ ಬಿಡದಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಇಂದು ವಿಚಾರಣೆಗೆ ಕಂಪ್ಲಿ ಶಾಸಕ ಗಣೇಶ್ ಹಾಜರಾಗಿದ್ದರು.
ಇಂದು ಹಿರಿಯ ವಕೀಲ ಆರ್ ಟಿ ಕೃಷ್ಣ ಮೃತರಾಗಿರುವ ಹಿನ್ನೆಲೆ ವಕೀಲರು ಪಾಲ್ಗೊಳ್ಳದೇ ಕೋರ್ಟ್ ಕಲಾಪದಿಂದ ದೂರ ಉಳಿದಿದ್ದರು. ಹೀಗಾಗಿ ಸ್ವತಃ ಕಂಪ್ಲಿ ಗಣೇಶ್ ತಮ್ಮ ಪರ ವಕಾಲತ್ತು ಅರ್ಜಿ ಸಲ್ಲಿಸಿದ್ದು, ಕೋರ್ಟ್ ವಿಚಾರಣೆಯನ್ನು ನ.14ಕ್ಕೆ ಮುಂದೂಡಲಾಗಿದೆ.