ಬಳ್ಳಾರಿ: ಹಾಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ. ನಿಂಬರಗಿ ಅವರನ್ನು ಬೆಳಗಾವಿ ಜಿಲ್ಲೆಗೆ ದಿಢೀರ್ ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಲೋಕಸಭಾ ಚುನಾವಣೆಯ ನಿಮಿತ್ತ ಕಳೆದ ಮಾರ್ಚ್ ತಿಂಗಳಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ನೇಮಕಗೊಂಡಿದ್ದ ಲಕ್ಷ್ಮಣ ನಿಂಬರಗಿ, ಕಾನೂನು ಬಾಹಿರ ಹಾಗೂ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಿದ್ದರು. ರೋಲ್ ಕಾಲ್ ಮಾಡುವ ಮಂದಿಗೆ ಎಸ್ಪಿ ಲಕ್ಷ್ಮಣ ನಿಂಬರಗಿಯವರು ಸಿಂಹಸ್ವಪ್ನವಾಗಿದ್ದರು.
ನೂತನ ಎಸ್ಪಿಯಾಗಿ ಬಾಬಾ ನೇಮಕ:
ಬೆಂಗಳೂರಿನ ಗಣ್ಯರ ಭದ್ರತಾ ವಿಭಾಗದ ಎಸ್ಪಿಯಾಗಿದ್ದ ಸಿ.ಕೆ.ಬಾಬಾ ಅವರು ಬಳ್ಳಾರಿ ಎಸ್ಪಿಯಾಗಿ ನೇಮಕಗೊಂಡಿದ್ದಾರೆ. ಈ ಹಿಂದೆ ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಅನುಭವ ಸಿ.ಕೆ.ಬಾಬಾ ಅವರಿಗಿದೆ.