ETV Bharat / city

ಬಳ್ಳಾರಿ: ಕೋವಿಶೀಲ್ಡ್ ಲಸಿಕೆ ಪಡೆದ ಡಿಸಿ, ಎಸ್​ಪಿ - ಜಿಲ್ಲಾಧಿಕಾರಿ ಪವನಕುಮಾರ ಮಲಪಾಟಿ

ಬಳ್ಳಾರಿಯ ಡಿಹೆಚ್​ಒ ಕಚೇರಿ ಆವರಣದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಪೊಲೀಸ್ ಮತ್ತು ಕಂದಾಯ ಇಲಾಖೆಯ 9 ಸಾವಿರ ಸಿಬ್ಬಂದಿಗೆ ಕೊರೊನಾ ಲಸಿಕೆ ನೀಡುವ ಕಾರ್ಯ ನಡೆಯುತ್ತಿದೆ.

ಬಳ್ಳಾರಿಯಲ್ಲಿ ಕೊರೊನಾ ಲಸಿಕೆ ವಿತರಣೆ
ಬಳ್ಳಾರಿಯಲ್ಲಿ ಕೊರೊನಾ ಲಸಿಕೆ ವಿತರಣೆ
author img

By

Published : Feb 8, 2021, 1:15 PM IST

ಬಳ್ಳಾರಿ: ಜಿಲ್ಲೆಯ ಡಿಹೆಚ್​ಒ ಕಚೇರಿ ಆವರಣದಲ್ಲಿಂದು ಕಂದಾಯ ಇಲಾಖೆ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಕೋವಿಶೀಲ್ಡ್ ಲಸಿಕೆ ನೀಡುವ ಕಾರ್ಯ ನಡೆಯಿತು.

ಬಳ್ಳಾರಿಯಲ್ಲಿ ಕೊರೊನಾ ಲಸಿಕೆ ವಿತರಣೆ

ಜಿಲ್ಲಾಧಿಕಾರಿ ಪವನಕುಮಾರ ಮಲಪಾಟಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದುಲು ಅಡಾವತ್, ಜಿಲ್ಲಾ ಪಂಚಾಯತ್​ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್.ನಂದಿನಿ, ಎಡಿಸಿ ಮಂಜುನಾಥ, ಎಸಿ ರಮೇಶ ಕೋನರೆಡ್ಡಿ, ಜಿಲ್ಲಾ ಪಂಚಾಯತ್​ ಯೋಜನಾ ನಿರ್ದೇಶಕ ಚಂದ್ರಶೇಖರ ಗುಡಿ ಸೇರಿದಂತೆ ಇತರ ಅಧಿಕಾರಿಗಳು ಲಸಿಕೆ ಪಡೆದರು.

ಡಿಸಿ ಪವನಕುಮಾರ ಮಲಪಾಟಿ ಮಾತನಾಡಿ, ಕೋವಿಶೀಲ್ಡ್ ಲಸಿಕೆ ಪಡೆಯುವ ಮುನ್ನ ನನಗೆ ಯಾವುದೇ ರೀತಿಯ ಭಯ ಇರಲಿಲ್ಲ.‌ ಕಂದಾಯ ಮತ್ತು ಪೊಲೀಸ್ ಇಲಾಖೆಯ 9 ಸಾವಿರ ಸಿಬ್ಬಂದಿಗೆ ಇಂದಿನಿಂದ ಮೂರು ದಿನಗಳ ಕಾಲ ಲಸಿಕೆ ಹಾಕಲಾಗುವುದು.‌ ಪ್ರತಿಯೊಬ್ಬರು ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕೆಂದು ಮನವಿ ಮಾಡಿದರು.

ಎಸ್​ಪಿ ಸೈದುಲು ಅಡಾವತ್ ಮಾತನಾಡಿ, ಪೊಲೀಸ್ ಇಲಾಖೆಯಲ್ಲಿ ಅಂದಾಜು 2,800 ಮಂದಿ ಹೆಸರು ನೋಂದಾಯಿಸಿಕೊಂಡಿದ್ದಾರೆ. ಹಂತ ಹಂತವಾಗಿ ಕೋವಿಶೀಲ್ಡ್ ಲಸಿಕೆಯನ್ನು ಹಾಕಲಾಗುವುದು ಎಂದರು. ಈ ವೇಳೆ, ಡಿಹೆಚ್​ಒ ಡಾ. ಹೆಚ್.ಎಲ್.ಜನಾರ್ದನ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್‌.ಬಸರೆಡ್ಡಿ, ಡಾ.ಅನಿಲ್, ಡಾ.ಈಶ್ವರ ದಾಸಪ್ಪನವರ ಸೇರಿದಂತೆ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.