ETV Bharat / city

ಬಳ್ಳಾರಿ ಜಿಲ್ಲಾಸ್ಪತ್ರೆಯನ್ನ ನಾನ್ ಕೋವಿಡ್ ಆಸ್ಪತ್ರೆಯಾಗಿಸಲು ಚಿಂತನೆ: ಡಿ ಸಿ ನಕುಲ್ - ಮೊದಲಿಯರ್ ಸ್ಮರಣಾರ್ಥವಾಗಿ ನಿರ್ಮಿಸ

ಮೊದಲಿಯಾರ್ ಸ್ಮರಣಾರ್ಥವಾಗಿ ನಿರ್ಮಿಸಲಾಗಿದ್ದ ಈ ಜಿಲ್ಲಾ ಸರ್ಕಾರಿ ಆಸ್ಪತ್ರೆಯನ್ನ ಗರ್ಭಿಣಿಯರ ಹೆರಿಗೆ ಶಸ್ತ್ರ ಚಿಕಿತ್ಸೆಗೋಸ್ಕರನೇ ಮೀಸಲಿರಿಸಲಾಗಿತ್ತು.‌ ಕಳೆದ ಆರೇಳು ತಿಂಗಳುಕಾಲ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗಿತ್ತು. ಆದರೀಗ, ದಿನದಿಂದ ದಿನಕ್ಕೆ ಈ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರೋದರಿಂದ ಗರ್ಭಿಣಿಯರ ಹೆರಿಗೆ ಶಸ್ತ್ರಚಿಕಿತ್ಸೆಗೆ ಅನುಕೂಲ ಮಾಡಿಕೊಡುವ ಚಿಂತನೆಯನ್ನ ಜಿಲ್ಲಾಡಳಿತ ಹೊಂದಿದೆ.

Bellary District Hospital to Launch as Non Covid Hospital
ಬಳ್ಳಾರಿ ಜಿಲ್ಲಾಸ್ಪತ್ರೆಯನ್ನ ನಾನ್ ಕೋವಿಡ್ ಆಸ್ಪತ್ರೆಯಾಗಿ ಕಾರ್ಯಾರಂಭಕ್ಕೆ ಚಿಂತನೆ: ಡಿಸಿ ನಕುಲ್
author img

By

Published : Sep 9, 2020, 11:08 AM IST

ಬಳ್ಳಾರಿ: ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಕೋವಿಡ್ -19 ಪ್ರಕರಣಗಳು ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಸ್ಪತ್ರೆಯನ್ನ ಇದೀಗ ನಾನ್ ಕೋವಿಡ್ ಆಸ್ಪತ್ರೆಯನ್ನಾಗಿಸಲು ಜಿಲ್ಲಾಡಳಿತ ಗಂಭೀರ ಚಿಂತನೆ ನಡೆಸಿದೆ.

ಮೊದಲಿಯಾರ್ ಸ್ಮರಣಾರ್ಥ ನಿರ್ಮಿಸಲಾಗಿದ್ದ ಈ ಜಿಲ್ಲಾ ಸರ್ಕಾರಿ ಆಸ್ಪತ್ರೆಯನ್ನ ಗರ್ಭಿಣಿಯರ ಹೆರಿಗೆ ಶಸ್ತ್ರ ಚಿಕಿತ್ಸೆಗೋಸ್ಕರನೇ ಮೀಸಲಿರಿಸಲಾಗಿತ್ತು.‌ ಕಳೆದ ಆರೇಳು ತಿಂಗಳು ಕಾಲ ಕೋವಿಡ್ ಆಸ್ಪತ್ರೆಯನ್ನಾಗಿ ಮಾಡಲಾಗಿತ್ತು. ಆದರೀಗ, ದಿನದಿಂದ ದಿನಕ್ಕೆ ಈ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರೋದರಿಂದ ಗರ್ಭಿಣಿಯರ ಹೆರಿಗೆ ಶಸ್ತ್ರಚಿಕಿತ್ಸೆಗೆ ಅನುಕೂಲ ಮಾಡಿ ಕೊಡುವ ಚಿಂತನೆಯನ್ನ ಜಿಲ್ಲಾಡಳಿತ ಹೊಂದಿದೆ.

ಇದರಿಂದ ಬಡ ಹಾಗೂ ಕೂಲಿಕಾರ್ಮಿಕ ಮತ್ತು ಮಧ್ಯಮ ವರ್ಗದ ಗರ್ಭಿಣಿಯರು ಖಾಸಗಿ ಆಸ್ಪತ್ರೆಗಳಲ್ಲಿ ಈ ಹೆರಿಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಸಾವಿರಾರು ರೂಪಾಯಿ ಹಣ ವ್ಯಯಿಸಿ ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳೋದನ್ನ ತಪ್ಪಿಸಲು ಈ ನಿರ್ಧಾರಕ್ಕೆ ಜಿಲ್ಲಾಡಳಿತ ಬಂದಿದೆ. ಈ ಕುರಿತು ಕೋವಿಡ್ ಟಾಸ್ಕ್ ಪೋರ್ಸ್ ಸಭೆಯಲ್ಲಿ ಎಲ್ಲ ಅಧಿಕಾರಿಗಳು ಹಾಗೂ ಭಾರತೀಯ ವೈದ್ಯಕೀಯ ಸಂಘದ (ಐಎಂಎ) ಪದಾಧಿಕಾರಿಗಳೊಂದಿಗೆ ಸುದೀರ್ಘವಾಗಿ ಚರ್ಚಿಸಿ ಸೂಕ್ತ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ನಿರ್ಧರಿಸಿದೆ.

ಈ ಕುರಿತು ಈಟಿವಿ ಭಾರತದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಅವರು, ಜಿಲ್ಲೆಯಾದ್ಯಂತ ದಿನದಿಂದ ದಿನಕ್ಕೆ ಕೋವಿಡ್ ಸೋಂಕಿತರ ಸಂಖ್ಯೆಯು ಇಳಿಮುಖ ಆಗುತ್ತಿದೆ.‌ ನಮ್ಮಲ್ಲಿ ಅಗತ್ಯಕ್ಕನುಗುಣವಾಗಿ ಬೆಡ್ ಗಳು ಲಭ್ಯವಿರುತ್ತವೆ ಎಂದು ತಿಳಿಸಿದರು.

ಇದಲ್ಲದೇ, ಬಳ್ಳಾರಿಯ ಟ್ರಾಮಾಕೇರ್ ಸೆಂಟರ್ ಅನ್ನು ಪೂರ್ಣ ಪ್ರಮಾಣದಲ್ಲಿ ಡೆಡಿಕೇಟೆಡ್ ಕೋವಿಡ್ ಕೇರ್ ಸೆಂಟರ್ ಆಗಿ ಮಾಡಲಾಗುತ್ತೆ.‌ ಹೀಗಾಗಿ, ಜಿಲ್ಲಾಸ್ಪತ್ರೆಯನ್ನ ನಾನ್ ಕೋವಿಡ್ ಆಸ್ಪತ್ರೆಯನ್ನಾಗಿಸಲು ಗಂಭೀರವಾಗಿ ಚಿಂತನೆ ನಡೆಸಲಾಗಿದೆ. ಬಹುಶಃ ಅಕ್ಟೋಬರ್ ಮೊದಲ ವಾರದಲ್ಲಿ ಜಿಲ್ಲಾಸ್ಪತ್ರೆಯನ್ನ ನಾನ್ ಕೋವಿಡ್ ಆಸ್ಪತ್ರೆಯನ್ನಾಗಿಸಲು ಈಗಾಗಲೇ ಸಕಲ ತಯಾರಿ ಕೂಡ ನಡೆದಿದೆ. ಕೋವಿಡ್ ಟಾಸ್ಕ್ ಪೋರ್ಸ್ ಸಮಿತಿಯ ಸಭೆಯಲ್ಲಿನ ಅಂತಿಮ ನಿರ್ಧಾರವೊಂದೇ ಬಾಕಿಯಿದೆ ಎಂದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.