ETV Bharat / city

ಸೋಂಕಿತರ ಬಗ್ಗೆ ಮಾಹಿತಿ ನೀಡುವಂತೆ ಪಾಲಿಕೆ ಸದಸ್ಯರಿಗೆ ಆಯುಕ್ತೆ ಮನವಿ - ಬಳ್ಳಾರಿ ಮಹಾನಗರ ಪಾಲಿಕೆಯ ಆಯುಕ್ತೆ ಪ್ರೀತಿ ಗೆಹ್ಲೋಟ್

ಬಳ್ಳಾರಿ ಮಾಹಾನಗರ ಪಾಲಿಕೆಗೆ ಹೊಸದಾಗಿ ಆಯ್ಕೆಯಾದ ಮಹಾನಗರ ಪಾಲಿಕೆ 39 ವಾರ್ಡ್‍ಗಳ ಸದಸ್ಯರೊಂದಿಗೆ ಗುರುವಾರ ನಡೆದ ಕೋವಿಡ್ ಕುರಿತ ಸಭೆಯಲ್ಲಿ ಮಾತನಾಡಿದ ಬಳ್ಳಾರಿ ಮಹಾನಗರ ಪಾಲಿಕೆ ಆಯುಕ್ತೆ ಪ್ರೀತಿ ಗೆಹ್ಲೋಟ್​​, ಸೋಂಕಿತರ ಸಂಪರ್ಕಿತರನ್ನು ಗುರುತಿಸುವುದು ಕಷ್ಟವಾಗುತ್ತಿದೆ. ನಿಮ್ಮ ನಿಮ್ಮ ವಾರ್ಡ್‍ಗಳಲ್ಲಿ ಪತ್ತೆಯಾಗುವ ಸೋಂಕಿತರ ಸಂಪರ್ಕಿತರ ಬಗ್ಗೆ ಮಾಹಿತಿ ನೀಡಿ ಎಂದು ಸದಸ್ಯರಿಗೆ ಸೂಚನೆ ನೀಡಿದರು.

bellary municipality ward member meeting with commissioner preethi gehlot
ಬಳ್ಳಾರಿ ಮಹಾನಗರ ಪಾಲಿಕೆ
author img

By

Published : May 20, 2021, 7:36 PM IST

ಬಳ್ಳಾರಿ: ನಗರದಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಸೋಂಕಿತರ ಸಂಪರ್ಕಿತರನ್ನು ಗುರುತಿಸುವುದು ಕಷ್ಟವಾಗುತ್ತಿದೆ. ಹೀಗಾಗಿ ಆಯಾ ವಾರ್ಡ್‍ಗಳಲ್ಲಿ ಪತ್ತೆಯಾಗುವ ಸೋಂಕಿತರ ಸಂಪರ್ಕಿತರ ಬಗ್ಗೆ ಮಾಹಿತಿ ನೀಡಿ, ಕೋವಿಡ್ ಸರಪಳಿಯನ್ನು ತುಂಡರಿಸಲು ನೆರವಾಗಿ ಎಂದು ಮಹಾನಗರ ಪಾಲಿಕೆಯ ಆಯುಕ್ತೆ ಪ್ರೀತಿ ಗೆಹ್ಲೋಟ್ ಅವರು ನೂತನ ವಾರ್ಡ್​​​ ಸದಸ್ಯರಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಹೊಸದಾಗಿ ಆಯ್ಕೆಯಾದ ಮಹಾನಗರ ಪಾಲಿಕೆ 39 ವಾರ್ಡ್‍ಗಳ ಸದಸ್ಯರೊಂದಿಗೆ ಗುರುವಾರ ನಡೆದ ಕೋವಿಡ್ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ಎಲ್ಲರೂ ಕೋವಿಡ್ ಲಸಿಕೆಯನ್ನು ಪಡೆಯಿರಿ. ಜನರಲ್ಲಿ ಲಸಿಕೆ ಕುರಿತು ಇರುವ ಭಯವನ್ನು ಹೋಗಲಾಡಿಸಿ. ಲಸಿಕೆ ಪಡೆದುಕೊಳ್ಳುವಂತೆ ಹೇಳಿ. ಕೋವಿಡ್ ಸಂಪರ್ಕಿತರನ್ನು ಗುರುತಿಸುವ ಮೂಲಕ ಸೋಂಕು ಹರಡುವಿಕೆಯನ್ನು ತಡೆಗಟ್ಟಬಹುದು ಎಂದು ತಿಳಿಸಿದರು.

39 ವಾರ್ಡ್‍ಗಳಲ್ಲಿ ಸದಸ್ಯರನ್ನು ಒಳಗೊಂಡಂತೆ ಒಂದು ತಂಡವನ್ನು ರಚಿಸಲಾಗುವುದು. ಕೋವಿಡ್ ಕುರಿತು ಜನರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಪ್ರಕರಣಗಳು ಮತ್ತು ಸಂಪರ್ಕಿತರ ಮಾಹಿತಿ ಕಲೆಹಾಕಬೇಕು ಎಂದರು. ಇದುವರೆಗೆ ಮಹಾನಗರ ಪಾಲಿಕೆಯಿಂದ ತೆಗೆದುಕೊಂಡ ಕ್ರಮಗಳ ಬಗ್ಗೆ ಸದಸ್ಯರಿಗೆ ವಿವರಿಸಿದರು.

ಲಸಿಕೆ ಪಡೆದವರಲ್ಲಿ ಮರಣ ಪ್ರಮಾಣ, ಕೋವಿಡ್​​ ಮರಳಿ ಬರುವುದು ಕಡಿಮೆ

ಸಹಾಯಕ ಆಯುಕ್ತ ರಮೇಶ್ ಕೋನರೆಡ್ಡಿ ಮಾತನಾಡಿ, ಕೋವಿಡ್ ಲಸಿಕೆ ಪಡೆದವರಲ್ಲಿ ಕೊರೊನಾ ಲಕ್ಷಣಗಳು ಕಂಡು ಬರುವುದು ಕಡಿಮೆಯಿದೆ. ಜಿಲ್ಲೆಯಲ್ಲಿ ಲಸಿಕೆ ಪಡೆದವರ ಮರಣವೂ ದಾಖಲಾಗಿಲ್ಲ. ಹೀಗಾಗಿ ಎಲ್ಲರೂ ಕೋವಿಡ್ ಲಸಿಕೆ ಪಡೆಯಿರಿ ಎಂದು ಹೇಳಿದರು.

ಉಚಿತ ಶವಸಾಗಾಣಿಕೆ

ಜಿಲ್ಲಾಡಳಿತದಿಂದ ನಗರದಾದ್ಯಂತ ಉಚಿತವಾಗಿ ಶವಸಾಗಾಣಿಕೆಗೆ ಅವಕಾಶ ನೀಡಲಾಗಿದೆ. ಇದಕ್ಕೆ ಯಾವುದೇ ರೀತಿಯ ಹಣಕೊಡುವ ಹಾಗಿಲ್ಲ. ಕೋವಿಡ್ ಸೋಂಕಿನಿಂದ ಮೃತಪಟ್ಟವರನ್ನು ಮನೆಗೆ ಕರೆದುಕೊಂಡು ಹೋಗದೆ ನೇರವಾಗಿ ರುದ್ರಭೂಮಿಗೆ ತೆಗೆದುಕೊಂಡು ಹೋಗಲು ಅವಕಾಶವಿದೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮತ್ತು ಮಾಹಿತಿ ನೀಡಿ ಎಂದರು.

ಕೊವಿಡ್ ಮೊದಲನೇ ಅಲೆಗೂ ಎರಡನೇ ಅಲೆಗೂ ತುಂಬಾ ವ್ಯತ್ಯಾಸವಿದೆ. ಲಕ್ಷಣಗಳ ಕಂಡು ಬಂದ ತಕ್ಷಣ ಪರೀಕ್ಷೆ ಮಾಡಿಸಿಕೊಳ್ಳಿ. ಪಾಸಿಟಿವ್ ಬಂದರೆ ವೈದ್ಯರ ನಿರ್ದೇಶನದಂತೆ ಔಷಧಿ ಪಡೆದು ಮಾರ್ಗದರ್ಶನ ಪಾಲಿಸಿ. ಪಾಸಿಟಿವ್ ಬಂದು ಹೊರಗಡೆ ಓಡಾಡುತ್ತಿರುವುದು ಕಂಡುಬರುತ್ತಿದೆ. ಇದರ ಕುರಿತು ನಿಮ್ಮ ನಿಮ್ಮ ವಾರ್ಡ್‍ಗಳ ಮಾಹಿತಿ ನೀಡಿ, ನೀವು ಅವರಿಗೆ ತಿಳಿಹೇಳುವ ಕೆಲಸ ಮಾಡಿ ಎಂದು ಸದಸ್ಯರಿಗೆ ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.