ಬಳ್ಳಾರಿ: ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರದ ತಾಲೂಕು ಕಚೇರಿ ಬಸ್ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವ ಶ್ರೀರಾಮುಲು, ಶಾಸಕ ಜಿ.ಸೋಮಶೇಖರ್ ರೆಡ್ಡಿ ಭಾವಚಿತ್ರಗಳನ್ನು ಸಾರ್ವಜನಿಕರಿಗೆ ಕಾಣುವಂತೆ ಅಳವಡಿಸುವ ಮೂಲಕ ಪಾಲಿಕೆಯ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಲಾಗಿದೆ.
ಕೋವಿಡ್-19 ಸೋಂಕು ತಡೆಗಟ್ಟುವ ಹಿನ್ನೆಲೆಯಲ್ಲಿ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲು ಚುನಾವಣಾಧಿಕಾರಿ ಕಚೇರಿಯೊಳಗೆ ಅಭ್ಯರ್ಥಿ ಸೇರಿ 5 ಜನರು ಮಾತ್ರ ಪ್ರವೇಶಿಸಬೇಕು. ಜೊತೆಗೆ ಮೆರವಣಿಗೆಯಲ್ಲಿ 50ಕ್ಕಿಂತ ಜಾಸ್ತಿ ಜನರು ಸೇರಬಾರದು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ.
ಆದರೆ, ಬೈಕ್ ರ್ಯಾಲಿ, ಯಾವುದೇ ಮಾಸ್ಕ್ ಧರಿಸದೇ, ರಸ್ತೆ ಉದ್ದಕ್ಕೂ ಪಟಾಕಿಗಳನ್ನು ಹಚ್ಚಿ ಮೆರವಣಿಗೆ ಮಾಡುವ ಮೂಲಕ ರಾಜಕೀಯ ಪಕ್ಷಗಳು ನಿಯಮ ಉಲ್ಲಂಘನೆ ಮಾಡುತ್ತಿವೆ. ಇದನ್ನು ಗಮನಿಸುವ ಅಧಿಕಾರಿಗಳು ಸುಮ್ಮನಿರುವುದು ಅಚ್ಚರಿ ಮೂಡಿಸಿದೆ.
ಇದನ್ನೂ ಓದಿ: ಮಗಳನ್ನು 10 ಲಕ್ಷಕ್ಕೆ ಮಾರಿದ ತಾಯಿ; ಮೊಮ್ಮಗಳ ರಕ್ಷಣೆಗೆ ಧಾವಿಸಿದ ಅಜ್ಜಿ