ETV Bharat / city

ಗಣಿನಾಡಿನ 74 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ: 15 ಸಾವು - ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ

ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಈವರೆಗೆ 74 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ.

Bellary
ಗಣಿನಾಡಿನ 74 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ
author img

By

Published : Jun 4, 2021, 2:20 PM IST

ಬಳ್ಳಾರಿ: ಗಣಿನಾಡು ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಈವರೆಗೆ 74 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಂಡಿದೆ. ಈ ಪೈಕಿ 15 ರೋಗಿಗಳು ಮೃತಪಟ್ಟಿದ್ದಾರೆ.

ಗಣಿನಾಡಿನ 74 ಮಂದಿಯಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆ

ಸರಿಯಾದ ಸಮಯಕ್ಕೆ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವೈಯಲ್ಸ್ ಸಿಗದ ಕಾರಣ 15 ರೋಗಿಗಳು ಸಾವನ್ನಪ್ಪಿದ್ದಾರೆ. ಜಿಲ್ಲಾಡಳಿತದ ಮಾಹಿತಿ ಪ್ರಕಾರ, ಜೂನ್ ತಿಂಗಳ ಮೊದಲ ವಾರದಲ್ಲಿ ಸಮರ್ಪಕವಾಗಿ ವೈಯಲ್ಸ್ ಒದಗಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ, ಇಂಡೆಂಟ್ ಹಾಕಿದಷ್ಟು ವೈಯಲ್ಸ್ ಸಿಗದ ಕಾರಣ ರೋಗಿಗಳ ಸಾವಿನ ಸಂಖ್ಯೆ ಹೆಚ್ಚುತ್ತಿದೆ.

ಈ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಪವನಕುಮಾರ ಮಾಲಪಾಟಿ, ಈ ವಾರದಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವೈಯಲ್ಸ್ ಬರುವ ನಿರೀಕ್ಷೆಯಲ್ಲಿದ್ದೇವೆ. ಹೊರಗಡೆ ಕೂಡ ಈ ವೈಯಲ್ಸ್ ಸಿಗುತ್ತಿಲ್ಲ. ರಾಜ್ಯ ಸರ್ಕಾರವೇ ಇದರ ಪೂರೈಕೆಯ ಜವಾಬ್ದಾರಿ ಹೊತ್ತಿದೆ ಎಂದರು.

ಬ್ಲ್ಯಾಕ್ ಫಂಗಸ್ ರೋಗಿಯ ಸಂಬಂಧಿ ಶಂಕರ ಮಾತನಾಡಿ, ಬ್ಲ್ಯಾಕ್ ಫಂಗಸ್ ಕಾಯಿಲೆಗೆ ವೈಯಲ್ಸ್ ಸಮರ್ಪಕವಾಗಿ ಪೂರೈಕೆಯಾಗದಿರುವುದರಿಂದ ಸಾವಿನ ಸಂಖ್ಯೆ ಹೆಚ್ಚುತ್ತಿದೆ. ಇಷ್ಟಾದರೂ ರಾಜ್ಯ ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ ಎಂದು ದೂರಿದರು.

ಓದಿ: ಶಿಲ್ಪಾನಾಗ್​ ಪರ ಬೀದಿಗಿಳಿದ ಮೈಸೂರು ಮಹಾನಗರ ಪಾಲಿಕೆ ಸದಸ್ಯರು!

ETV Bharat Logo

Copyright © 2024 Ushodaya Enterprises Pvt. Ltd., All Rights Reserved.