ETV Bharat / city

ಬಳ್ಳಾರಿ: ಕಾಲು ಜಾರಿ ಕೃಷಿಹೊಂಡಕ್ಕೆ ಬಿದ್ದು ಬಾಲಕ ಸಾವು - ballary death case

ಸಿರುಗುಪ್ಪ ತಾಲೂಕಿನ ಬೈರಾಪುರ ಗ್ರಾಮದ ಬಾಲಕ ಬಾಲಾಜಿ ಕೃಷಿಹೊಂಡದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು ಸಾವನ್ನಪ್ಪಿದ್ದಾನೆ.

balaji
ಬಾಲಕ ಬಾಲಾಜಿ
author img

By

Published : Sep 15, 2021, 12:31 PM IST

ಬಳ್ಳಾರಿ: ಬಾಲಕನೊಬ್ಬ ಕೃಷಿಹೊಂಡದಲ್ಲಿ ಆಕಸ್ಮಿಕವಾಗಿ ಕಾಲುಜಾರಿ ಬಿದ್ದು, ಮೃತಪಟ್ಟಿರುವ ಘಟನೆ ಸಿರುಗುಪ್ಪ ತಾಲೂಕಿನ ಬೈರಾಪುರ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕನನ್ನು ಬಾಲಾಜಿ ಎಂದು ಗುರುತಿಸಲಾಗಿದೆ.

ಬಾಲಾಜಿ ತಂದೆ ಭೀಮೇಶ ಕಳೆದ ತಿಂಗಳ ಹಿಂದೆಯಷ್ಟೇ ಎರಡು ಎಕೆರೆ ಭೂಮಿಯನ್ನು ಖರೀದಿಸಿದ್ದಾರೆ. ಈ ಭೂಮಿಯಲ್ಲಿ ಕೃಷಿ ಹೊಂಡ ನಿರ್ಮಿಸಿಕೊಂಡಿದ್ದಾರೆ. ಅದರ ಬಳಿ ಹೋದಾಗ ಬಾಲಾಜಿ ಕಾಲು ಜಾರಿ ಬಿದ್ದು, ಅಸ್ವಸ್ಥನಾಗಿದ್ದಾನೆ. ಬಳಿಕ ಬಾಲಕನನ್ನು ಚಿಕಿತ್ಸೆಗಾಗಿ ಆ್ಯಂಬುಲೆನ್ಸ್​​​ ಮೂಲಕ ತೆಕ್ಕಲಕೋಟೆ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ನಂತರ ವೈದ್ಯರು ಬಾಲಕ ಮೃತಪಟ್ಟಿರುವುದಾಗಿ ಖಚಿತಪಡಿಸಿದ್ದಾರೆ.

ಇದನ್ನೂ ಓದಿ: ಬಂಟ್ವಾಳ: ಕೆರೆಯಲ್ಲಿ ಮುಳುಗಿ ಮಂಗಳೂರಿನ ವೈದ್ಯೆ ಸಾವು!

ತೆಕ್ಕಲಕೋಟೆ ವೃತ್ತ ನಿರೀಕ್ಷಕ ಕಾಳಿಕೃಷ್ಣ ಹಾಗೂ ಪಿಎಸ್​ಐ ಶಿವಕುಮಾರ ನಾಯ್ಕ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.‌ ತೆಕ್ಕಲಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.