ವಿಜಯನಗರ: ಸದಾ ಒಂದಿಲ್ಲೊಂದು ವಿವಾದದಿಂದ ಸುದ್ದಿಯಾಗುವ ಮಾಜಿ ಸಚಿವ, ಹೂವಿನಹಡಗಲಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಪಿ.ಟಿ.ಪರಮೇಶ್ವರ ನಾಯ್ಕ ಸರ್ಕಾರಿ ಕಚೇರಿ ಆವರಣದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡು ಹೊಸ ವಿವಾದ ಸೃಷ್ಟಿಸಿಕೊಂಡರು.
ಯಾವುದೇ ಸರ್ಕಾರಿ ಕಚೇರಿಯಲ್ಲಿ ಮೋಜು-ಮಸ್ತಿ, ಹುಟ್ಟುಹಬ್ಬ ಸೇರಿದಂತೆ ಇತರೆ ಯಾವುದೇ ಖಾಸಗಿ ಕಾರ್ಯಕ್ರಮಗಳನ್ನು ನಡೆಸದಂತೆ ಸರ್ಕಾರದ ಆದೇಶವಿದೆ. ಆದರೆ ಈ ಆದೇಶವನ್ನು ಪಿ.ಟಿ.ಪರಮೇಶ್ವರ ನಾಯ್ಕ ಗಾಳಿಗೆ ತೂರಿದರು.
ಪುರಸಭೆಯ ಅಧಿಕಾರಿಗಳು ಶಾಸಕರಿಗೆ ಶಾಲು ಹೊದಿಸಿ ಸನ್ಮಾನಿಸಿ, ಕೇಕ್ ಕತ್ತರಿಸಿರುವ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಶಾಸಕರ ಅಧಿಕಾರ ದುರ್ಬಳಕೆಗೆ ಸಾಥ್ ನೀಡಿದ ಪುರಸಭೆ ಮುಖ್ಯಾಧಿಕಾರಿ ಮತ್ತು ಸಿಬ್ಬಂದಿ ವರ್ತನೆಗೆ ಸಾರ್ವಜನಿಕರಿಂದ ಆಕ್ರೋಶ ವ್ಯಕ್ತವಾಗಿದೆ.
ಇದನ್ನೂ ಓದಿ: "ಬಿಜೆಪಿ ಮಿತ್ರರೊಂದಿಗೆ ಮಾತನಾಡಿದ ಬಳಿಕ ನನ್ನ ಫೋನ್ಗೆ ಕರೆ ಬರುತ್ತಿಲ್ಲ, ಕರೆ ಮಾಡಲು ಸಾಧ್ಯವಾಗುತ್ತಿಲ್ಲ"