ETV Bharat / city

ಕೊರೊನಾ ಸೋಂಕಿತ ವಯೋವೃದ್ಧೆ ಸಾವು.. ಹೆಚ್ಚಿದ ಆತಂಕ

author img

By

Published : Jul 13, 2020, 8:48 PM IST

ಕೊರೊನಾ ಸೋಂಕಿತ ವಯೋವೃದ್ಧೆಯೊಬ್ಬರು ಸಾವನ್ನಪ್ಪಿರುವ ಘಟನೆ ಬಳ್ಳಾರಿಯ ವಿಮ್ಸ್​ ಆಸ್ಪತ್ರೆಯಲ್ಲಿ ಜರುಗಿದ್ದು, ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ವೃದ್ಧೆ ಸಾವನ್ನಪ್ಪಿದ್ದಾಳೆ ಎಂಬ ದೂರುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ.

corona-patient-died-in-bellary-vims-hospital
ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ

ಬಳ್ಳಾರಿ: ಇಲ್ಲಿನ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ (ವಿಮ್ಸ್) ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ವಯೋವೃದ್ಧೆ ಸಾವನ್ನಪ್ಪಿದ್ದು, ಆಸ್ಪತ್ರೆಯ ರೋಗಿಗಳಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.

ನಗರದ ಕಪ್ಪಗಲ್ಲು ರಸ್ತೆಯ ನಿವಾಸಿ 73 ವರ್ಷದ ವಯೋವೃದ್ಧೆ ಕಳೆದ ಎರಡು ದಿನಗಳ ಹಿಂದಷ್ಟೇ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ವಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

ಕೊರೊನಾ ಸೋಂಕಿತ ವಯೋವೃದ್ಧೆ ಸಾವು

ವಿಮ್ಸ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯದಿಂದಾಗಿ ವೃದ್ಧೆ ಸಾವನ್ನಪ್ಪಿದ್ದಾರೆ ಎಂಬ ದೂರುಗಳು ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿವೆ. ಅದರಿಂದ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಆತಂಕ ಶುರುವಾಗಿದೆ.

ವಿಮ್ಸ್ ಆಸ್ಪತ್ರೆಯ ಐಸಿಯುನಲ್ಲಿ ಈ ವಯೋವೃದ್ಧೆ ಚಿಕಿತ್ಸೆ ಪಡೆಯುತ್ತಿದ್ದರು.‌ ನಿನ್ನೆ ಸಂಜೆ 5 ಗಂಟೆಗೆ ಕೊರೊನಾ ಪಾಸಿಟಿವ್ ವರದಿ ಬಂದರೂ ತಡರಾತ್ರಿವರೆಗೂ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ಶಿಫ್ಟ್ ಮಾಡದೆ, ಮಧ್ಯರಾತ್ರಿ 12 ಗಂಟೆಯ ಬಳಿಕ ಕೋವಿಡ್ ಘಟಕಕ್ಕೆ ಶಿಫ್ಟ್ ಮಾಡಿದ ಮರುಕ್ಷಣ ವಯೋವೃದ್ದೆ ಸಾವನ್ನಪ್ಪಿದ್ದಾರೆ. ಸದ್ಯ ಐಸಿಯುನಲ್ಲಿರುವ ಉಳಿದ ರೋಗಿಗಳಲ್ಲಿ ಆತಂಕ ಹೆಚ್ಚಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.