ETV Bharat / city

ಜಿಂದಾಲ್ ಸಮೂಹ ಸಂಸ್ಥೆಯ 525 ಸಿಬ್ಬಂದಿಗೆ ಕೋವಿಡ್‌ ಸೋಂಕು - Bellary Corona Case

ಜಿಂದಾಲ್ ಸಮೂಹ ಸಂಸ್ಥೆ ಸೇರಿದಂತೆ ಬಳ್ಳಾರಿ-ವಿಜಯನಗರ‌ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಅದರಲ್ಲೂ ನಿನ್ನೆ ಒಂದೇ ದಿನ 16 ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

bellary
ಗಣಿನಾಡಲ್ಲಿ ಕೊರೊನಾ ಅಬ್ಬರ
author img

By

Published : Apr 26, 2021, 10:27 AM IST

ಬಳ್ಳಾರಿ: ಕೊರೊನಾ ಎರಡನೇ ಅಲೆಯು ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿದ್ದು, ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಜಿಂದಾಲ್ ಸಮೂಹ ಸಂಸ್ಥೆಯಲ್ಲೇ ಈ ವರ್ಷ 525 ನೌಕರರಲ್ಲಿ ಸೋಂಕು ದೃಢಪಟ್ಟಿದೆ.

ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಐದರಿಂದ ಎಂಟು ಮಂದಿ ಸೋಂಕಿನಿಂದ ಮೃತಪಡುತ್ತಿದ್ದರು. ಆದರೆ, ನಿನ್ನೆ ಒಂದೇ ದಿನ 16 ಮಂದಿ ಸೋಂಕಿಗೆ ಬಲಿಯಾಗಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ. ಈ ಮೂಲಕ ಸಾವಿನ ಸಂಖ್ಯೆ 656ಕ್ಕೆ ಏರಿಕೆಯಾಗಿದೆ.

ಜಿಲ್ಲೆಯ ಜಿಂದಾಲ್ ಸಮೂಹ ಸಂಸ್ಥೆ ಸಂಡೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನಲ್ಲೇ ಸೋಂಕು ಹೆಚ್ಚುತ್ತಿದ್ದು, ಮರಣ ಪ್ರಮಾಣವು ಹೆಚ್ಚಾಗಿದೆ.

ಇದನ್ನೂ ಓದಿ: ಕೋವಿಡ್ ಸೋಂಕಿತರ ಚಿಕಿತ್ಸೆಗೆ ತೊಂದರೆಯಾಗದಂತೆ ನೋಡಿಕೊಳ್ಳಿ: ಸಂಸದ ಖೂಬಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.