ಬಳ್ಳಾರಿ: ಜಿಲ್ಲೆಯಲ್ಲಿಂದು 338 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 5,974ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.
ಇಂದು ಮೂವರು ಕೊರೊನಾಗೆ ಬಲಿಯಾಗಿದ್ದು, ಮೃತರ ಸಂಖ್ಯೆ 91ಕ್ಕೆ ಏರಿಕೆಯಾಗಿದೆ. 337 ಮಂದಿ ಗುಣಮುಖರಾಗಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು 2,800 ಮಂದಿ ಗುಣಮುಖರಾಗಿದ್ದಾರೆ.
ಸದ್ಯ ಜಿಲ್ಲೆಯಲ್ಲಿ 3,083 ಸಕ್ರಿಯ ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.