ಹೊಸಪೇಟೆ: ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಮರಿಯಮ್ಮನಹಳ್ಳಿಯ ಕಾರ್ಖಾನೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ನೌಕರನಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ.
ಕಳೆದ ಕೆಲ ದಿನಗಳ ಹಿಂದಷ್ಟೇ ಲೋಕೊಪೈಲಟ್ಗಳಿಗೆ ಹಾಗೂ ಹೋಟೆಲ್ ಸಿಬ್ಬಂದಿಗೆ ಕೊರೊನಾ ಸೋಂಕು ಕಂಡುಬಂದಿತ್ತು. ಇದೀಗ ಕಾರ್ಖಾನೆ ಕಾರ್ಮಿಕನಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಆತಂಕ ಮನೆಮಾಡಿದೆ.
ಸದ್ಯಕ್ಕೆ ತಾಲೂಕಿನಲ್ಲಿ 51 ಸಕ್ರಿಯ ಪ್ರಕರಣಗಳಿದ್ದು, ಕಾರ್ಮಿಕನ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದವರನ್ನು ಪತ್ತೆಹಚ್ಚಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.