ಹೊಸಪೇಟೆ (ವಿಜಯನಗರ): ಗಾಂಧಿ ಜಯಂತಿಯಂದು ನಡೆಯಲಿರುವ ವಿಜಯನಗರ ಜಿಲ್ಲಾ ಉದ್ಘಾಟನಾ ಕಾರ್ಯಕ್ರಮಕ್ಕೆ ಕ್ಷಣಗಣನೆ ಆರಂಭವಾಗಿದೆ.
ಈಗಾಗಲೇ ಹತ್ತು ದಿನಗಳಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ವೇದಿಕೆ ನಿರ್ಮಾಣ ಕಾರ್ಯ ನಡೆದಿದೆ. ಹಂಪಿಯ ಮಾತಂಗ ಪರ್ವತ ಹಾಗೂ ವಿರೂಪಾಕ್ಷೇಶ್ವರ ಗೋಪುರ ಶೈಲಿಯಲ್ಲಿ ವೇದಿಕೆ ನಿರ್ಮಾಣ ಮಾಡಲಾಗುತ್ತಿದೆ. ಎರಡು ಸಾವಿರ ಪ್ರೇಕ್ಷಕರು ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಲಾಗಿದೆ.
ಇನ್ನು ರಾಜ್ಯದಲ್ಲಿ ಮೂರು ದಿನಗಳ ಕಾಲ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಹಾಗಾಗಿ ಪ್ರೇಕ್ಷಕರಿಗೆ ಮಳೆಯಿಂದ ತೊಂದರೆಯಾಗಬಾರದು ಎಂದು ಜರ್ಮನ್ ಮಾದರಿಯ ಟೆಂಟ್ ಹಾಕಲಾಗಿದೆ. ಈ ಕುರಿತು ನಮ್ಮ ಪ್ರತಿನಿಧಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರೊಂದಿಗೆ ನಡೆಸಿದ ಚಿಟ್ ಚಾಟ್ ಇಲ್ಲಿದೆ ನೋಡಿ.