ETV Bharat / city

ಅನರ್ಹ ಪಡಿತರ ಚೀಟಿದಾರರು ಬಿಪಿಎಲ್ ಕಾರ್ಡ್ ಹಿಂತಿರುಗಿಸುವಂತೆ ಡಿಸಿ ಸೂಚನೆ - DC instructs to return the unworthy BPL card

ಅನರ್ಹ ಪಡಿತರ ಚೀಟಿದಾರರು ತಾವು ಪಡೆದಿರುವಂತಹ ಅಂತ್ಯೋದಯ/ಆದ್ಯತಾ (ಬಿಪಿಎಲ್) ಪಡಿತರ ಚೀಟಿಯನ್ನು ಸ್ವಯಂ ಪ್ರೇರಿತವಾಗಿ ಏ.15 ರೊಳಗೆ ಹಿಂತಿರುಗಿಸಬೇಕು. ಇಲ್ಲದಿದ್ದರೆ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ
ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ
author img

By

Published : Mar 31, 2021, 7:51 AM IST

ಬಳ್ಳಾರಿ: ಜಿಲ್ಲೆಯಲ್ಲಿ ಅಂತ್ಯೋದಯ ಮತ್ತು ಬಿಪಿಎಲ್ ಕಾರ್ಡ್​ಗಳನ್ನು ಇಲಾಖೆ ಮಾನದಂಡಗಳ ಪ್ರಕಾರ ಮಾಹಿತಿ ನೀಡದೇ ಅಕ್ರಮವಾಗಿ ಪಡೆದಿರುವುದು ಕಂಡು ಬಂದಿದ್ದು, ಏ.15 ರೊಳಗಾಗಿ ಹಿಂತಿರುಗಿಸಿ ಎಪಿಎಲ್ ಪಡಿತರ ಚೀಟಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖಾಯಂ ನೌಕರರು ಅಂದರೆ ಸರ್ಕಾರದಿಂದ ಅನುದಾನ ಪಡೆಯುತ್ತಿರುವ ಸಂಸ್ಥೆಗಳು, ಸರ್ಕಾರಿ ಪ್ರಾಯೋಜಿತ, ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು/ಮಂಡಳಿಗಳು, ನಿಗಮಗಳು/ಸ್ವಾಯತ್ತ ಸಂಸ್ಥೆಗಳಲ್ಲಿ ನೌಕರಿಯಲ್ಲಿರುವವರು, ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆಯನ್ನು ಪಾವತಿಸುವ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್​​​​​​ಗಿಂತ ಹೆಚ್ಚಿನ ಒಣ ಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವುದು, ನಗರ ಪ್ರದೇಶದಲ್ಲಿ 1 ಸಾವಿರ ಚದರ ಅಡಿಗಿಂತ ಹೆಚ್ಚು ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು, ಕುಟುಂಬದ ವಾರ್ಷಿಕ ಆದಾಯವು ರೂ.1,20,000/-ಕಿಂತ ಹೆಚ್ಚು ಆದಾಯ ಹೊಂದಿರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವಂತ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ ನಾಲ್ಕುಚಕ್ರದ ವಾಹನವನ್ನು ಹೊಂದಿರುವವರು ಮಾನದಂಡಗಳನ್ನು ಮೀರಿ ಅಂತ್ಯೋದಯ ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿಗಳನ್ನು ಪಡೆದಿದ್ದಾರೆ. ಇಂತಹ ಪಡಿತರ ಚೀಟಿದಾರರು ಸ್ವಯಂಪ್ರೇರಿತವಾಗಿ ಆಯಾ ತಾಲೂಕಿನ ತಹಶೀಲ್ದಾರರಿಗೆ ಅಂತ್ಯೋದಯ ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿಗಳನ್ನು ಹಿಂದಿರುಗಿಸಿ ಎ.ಪಿ.ಎಲ್ ಪಡಿತರ ಚೀಟಿಯನ್ನು ಪಡೆಯಬೇಕು ಎಂದು ತಿಳಿಸಿದ್ದಾರೆ.

2011ರ ಜನಗಣತಿ ಪ್ರಕಾರ ಬಳ್ಳಾರಿ ಜಿಲ್ಲೆಯಲ್ಲಿ 5,38,665 ಕುಟುಂಬಗಳು ದಾಖಲಾಗಿದ್ದು, 2021ರ ಮಾರ್ಚ್ ತಿಂಗಳವರೆಗೆ ಜಿಲ್ಲೆಯಲ್ಲಿ 66,547 ಅಂತ್ಯೋದಯ, 5,30,341 ಆದ್ಯತಾ (ಬಿ.ಪಿ.ಎಲ್) ಸೇರಿ ಒಟ್ಟು 5,96,888 ಕುಟುಂಬಗಳಿಗೆ ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿ ನೀಡಲಾಗಿದೆ. ಜೊತೆಗೆ 60,571 ಕುಟುಂಬಗಳಿಗೆ ಆದ್ಯತೇತರ (ಎ.ಪಿ.ಎಲ್) ಪಡಿತರ ಚೀಟಿಗಳನ್ನು ಸಹ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅರ್ಥಿಕವಾಗಿ ಸಬಲರು ಮತ್ತು ಇತರ ಅನರ್ಹರು ಹೊಂದಿರುವ ಅಂತ್ಯೋದಯ ಮತ್ತು ಆದ್ಯತಾ ಪಡಿತರ ಚೀಟಿಗಳನ್ನು ಹಿಂದುರುಗಿಸಲು ತಪ್ಪಿದ್ದಲ್ಲಿ ಅಂತವರ ವಿರುದ್ಧ ಅಗತ್ಯ ವಸ್ತುಗಳ ಕಾಯ್ದೆ ಮತ್ತು ಕರ್ನಾಟಕ ಅನಧಿಕೃತ ಪಡಿತರ ಚೀಟಿ ಹೊಂದುವುದರ ತಡೆ ಆದೇಶ ಹಾಗೂ ಐಪಿಸಿ ಕಲಂ ಗಳಡಿ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿರುವ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಅವರು, ಈ ಅವಧಿಯಲ್ಲಿ ನ್ಯಾಯ ಬೆಲೆ ಅಂಗಡಿಯಿಂದ ಹಂಚಿಕೆ ಪಡೆದ ಆಹಾರ ಧಾನ್ಯಗಳ ಮೌಲ್ಯವನ್ನು ಮುಕ್ತ ಮಾರುಕಟ್ಟೆ ಬೆಲೆಯಲ್ಲಿ ವಸೂಲಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.