ಹೊಸಪೇಟೆ (ವಿಜಯನಗರ): ಅ.2ರಂದು ವಿಜಯನಗರ ಕರ್ನಾಟಕದ 31ನೇ ಜಿಲ್ಲೆಯಾಗಿ ಉದ್ಘಾಟನೆಗೊಳ್ಳುತ್ತಿದೆ. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರ ನೂತನ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಅವರನ್ನ ನೇಮಕಗೊಳಿಸಿ ಆದೇಶ ಹೊರಡಿಸಿದೆ.
ವಿಜಯನಗರ ಜಿಲ್ಲೆಯ ಮೊದಲ ಜಿಲ್ಲಾಧಿಕಾರಿಯಾಗಿ ಅನಿರುದ್ಧ್ ಶ್ರವಣ್ ನೇಮಕ ಮಾಡಲಾಗಿದೆ. ಈ ಹಿಂದೆ ವಿಜಯನಗರ ಜಿಲ್ಲೆ ರಚನೆಯ ಸಂದರ್ಭದಲ್ಲಿ ಅನಿರುದ್ಧ್ ಶ್ರವಣ್ ಅವರನ್ನು ವಿಶೇಷಾಧಿಕಾರಿಯಾಗಿ ನೇಮಿಸಲಾಗಿತ್ತು. ಅಲ್ಲದೇ, ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ನ ಆಯುಕ್ತರು ಸಹ ಆಗಿದ್ದರು. ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕನ್ ಈ ಆದೇಶ ಹೊರಡಿಸಿದ್ದಾರೆ.
ವಿಜಯನಗರ ಜಿಲ್ಲೆಯ ಮೊದಲ ಪೊಲೀಸ್ ವರಿಷ್ಠಾಧಿಕಾರಿಯಾಗಿ ಡಾ. ಅರುಣ್ ಕೆ ನೇಮಕಗೊಂಡಿದ್ದಾರೆ. 2014ರ ಬ್ಯಾಚ್ನ ಐಪಿಸ್ ಅಧಿಕಾರಿಯಾದ ಇವರು ಈ ಹಿಂದೆ ಭದ್ರತಾ ಮತ್ತು ಜಾಗೃತ ದಳದ ಎಸ್ಪಿ ಮತ್ತು ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಡಳಿತ ವಿಭಾಗದ ಕಾರ್ಯದರ್ಶಿ ನಾಗಪ್ಪ ಎಸ್ ಅವರು ನೇಮಕ ಆದೇಶ ಹೊರಡಿಸಿದ್ದಾರೆ.
ವಿಜಯನಗರ ಜಿಲ್ಲೆಗೆ ಸಿಇಒ ಆಗಿ ಕೆ ಎಂ ಗಾಯತ್ರಿ ನೇಮಕಗೊಂಡಿದ್ದಾರೆ. ಈ ಹಿಂದೆ ಮೈಸೂರಿನ ANSSIRD (ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್)ಯ ನಿರ್ದೇಶಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಜೇಮ್ಸ್ ತಾರಕ್ ಅವರು ಈ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ: ವಿಜಯನಗರ ಜಿಲ್ಲಾ ಉದ್ಘಾಟನಾ ಕಾರ್ಯಕ್ರಮಕ್ಕೆ ಕ್ಷಣಗಣನೆ..