ಹೊಸಪೇಟೆ: ಮಾರ್ಚ್ ತಿಂಗಳಿನಲ್ಲಿ ವಿಜಯನಗರ ಜಿಲ್ಲೆಗೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ನೇಮಕ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಆನಂದ್ ಸಿಂಗ್ ತಿಳಿಸಿದರು.
ಹೊಸಪೇಟೆ ನಗರದ ಕರ್ನಾಟಕ ಗೃಹ ಮಂಡಳಿ ಪ್ರದೇಶವನ್ನು ಇಂದು ಸ್ವಚ್ಛಗೊಳಿಸಲಾಯಿತು. ಸ್ವಚ್ಛತಾ ಕಾರ್ಯ ಪರಿಶೀಲಿಸಿ ಮಾತನಾಡಿದ ಅವರು, ಈ ಹಿಂದೆ ಕರ್ನಾಟಕ ಗೃಹ ಮಂಡಳಿಗೆ 81 ಎಕರೆ ಸೇರಿತ್ತು. ಅದರಲ್ಲಿ 40 ಎಕರೆಯನ್ನು ವಿಜಯನಗರ ಜಿಲ್ಲಾ ಕಚೇರಿಗೆ ನೀಡಲಾಗಿದೆ. ಮೊದಲು ವಿಶೇಷ ಅಧಿಕಾರಿಗಳು ಬರಲಿದ್ದಾರೆ. ಮಾರ್ಚ್ ತಿಂಗಳಿನಲ್ಲಿ ವಿಜಯನಗರ ಜಿಲ್ಲೆಗೆ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ನೇಮಕ ಮಾಡಲಾಗುವುದು ಎಂದರು.
ಇಲ್ಲಿನ ಕಟ್ಟಡದಲ್ಲಿ ತಾತ್ಕಾಲಿಕವಾಗಿ ಜಿಲ್ಲಾ ಕಚೇರಿ ಪ್ರಾರಂಭ ಮಾಡಲಾಗುವುದು. ಹಳೆಯ ಕಟ್ಟಡವನ್ನು ಸರಿಪಡಿಸಲಾಗುವುದು. ಬಳಿಕ ನೂತನ ಜಿಲ್ಲಾಧಿಕಾರಿ ಕಚೇರಿ ನಿರ್ಮಾಣವಾಗಲಿದೆ ಎಂದರು.