ಬಳ್ಳಾರಿ: ಗಣಿನಾಡು ಬಳ್ಳಾರಿಯಲ್ಲಿ ರಂಜಾನ್ ಮತ್ತು ಬಸವ ಜಯಂತಿಯನ್ನು ಸಂಭ್ರಮದಿಂದ ಆಚರಿಸಲಾಯಿತು. ಶಾಸಕ ನಾಗೇಂದ್ರ ಮತ್ತು ಸೋಮಶೇಖರ ರೆಡ್ಡಿ ಜಂಟಿಯಾಗಿ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಪರಸ್ಪರ ಶುಭಾಶಯ ವಿನಿಮಯ ಮಾಡುವ ಮೂಲಕ ನಾವೆಲ್ಲರೂ ಒಂದೇ ಎನ್ನುವ ಸಂದೇಶ ಸಾರಿದರು.
ಬಳಿಕ ಬಸವ ಜಯಂತಿ ಹಿನ್ನೆಲೆಯಲ್ಲಿ ಮೋತಿ ವೃತ್ತದಲ್ಲಿರುವ ಬಸವೇಶ್ವರ ಪುತ್ಥಳಿಗೆ ಶಾಸಕ ಸೋಮಶೇಖರ ರೆಡ್ಡಿ, ಅಲ್ಲಂ ವೀರಭದ್ರಪ್ಪ ಮಾಲಾರ್ಪಣೆ ಮಾಡಿದರು. ವೀರಶೈವ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷ ಎನ್. ತಿಪ್ಪಣ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ: ಈದ್ಗಾ ಮೈದಾನದಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಮಾಡಿದರು. ಧರ್ಮಗುರುಗಳು ಪ್ರಾರ್ಥನಾ ಸಂದೇಶ ಬೋಧನೆ ಮಾಡಿದರು. ಪ್ರಾರ್ಥನೆಯಲ್ಲಿ ಸಾವಿರಾರು ಮುಸ್ಲಿಮರು ಭಾಗಿಯಾಗಿ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. ಈದ್ಗಾ ಮೈದಾನದ ಸುತ್ತಮುತ್ತ ಗೃಹ ರಕ್ಷಕ ಸಿಬ್ಬಂದಿ ಸೇರಿದಂತೆ 200ಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜನೆ ಮಾಡಲಾಗಿತ್ತು.
ಇದನ್ನೂ ಓದಿ: ಬೆಂಗಳೂರು: ಬಸವೇಶ್ವರ ಪುತ್ಥಳಿಗೆ ಅಮಿತ್ ಶಾ ಮಾಲಾರ್ಪಣೆ