ಬಳ್ಳಾರಿ: ವೈದ್ಯಕೀಯ ವಿದ್ಯಾರ್ಹತೆ ಇಲ್ಲದೇ ಚಿಕಿತ್ಸೆ ನೀಡುತ್ತಿದ್ದ ವೈದ್ಯನ ಕ್ಲಿನಿಕ್ ಮೇಲೆ ಆರೋಗ್ಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕುರುಗೋಡು ತಾಲೂಕಿನ ಬಾದನಹಟ್ಟಿ ಗ್ರಾಮದಲ್ಲಿ ಆಂಧ್ರ ಮೂಲದ ಕೆ. ರುದ್ರಪ್ಪ ಅವರ ಕ್ಲಿನಿಕ್ನ್ನು ಅಧಿಕಾರಿಗಳು ಪರಿಶೀಲಿಸಿದಾಗ ನಕಲಿ ವೈದ್ಯರೆಂಬುದು ತಿಳಿದು ಬಂದಿದೆ. ಗ್ರಾಮದಲ್ಲಿ 18 ವರ್ಷಗಳಿಂದ ವೈದ್ಯಕೀಯ ವೃತ್ತಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ.
ನಕಲಿ ವೈದ್ಯ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿ ಕೊಂಡಿದ್ದಾರೆ. ಬಾದನಟ್ಟಿ ಗ್ರಾಮದ ಹಿರಿಯ ಮುಖಂಡರ ದೂರಿನ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ತಾಲೂಕು ಆರೋಗ್ಯ ಅಧಿಕಾರಿ ಡಾ.ಮೋಹನ ಕುಮಾರಿ, ಬಾದನಹಟ್ಟಿ ಸಮುದಾಯ ಆರೋಗ್ಯಾಧಿಕಾರಿ ಮೋತಿ, ಆರೋಗ್ಯ ನಿರಿಕ್ಷಣಾಧಿಕಾರಿ ಬಸವರಾಜ್ ಹಾಗೂ ಕುರುಗೋಡು ಪೋಲಿಸ್ ಠಾಣೆ ಎಎಸ್ಐ ಚಂದ್ರಮೌಳಿ ಕ್ಲಿನಿಕ್ಗೆ ದಾಳಿ ನಡೆಸಿದ್ದಾರೆ.
ಕುರುಗೋಡು ಪೋಲಿಸ್ ಠಾಣೆಯಲ್ಲಿ ಐಪಿಸಿ 420 ಮತ್ತು ಕೆಪಿಎಂಇ ಕಾಯ್ದೆ ಸೆಕ್ಷನ್ 19(1) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿ: ಕೈಮೇಲೆ ಆರೋಪಿ ಹೆಸರು ಬರೆದುಕೊಂಡು, ಆತ್ಮಹತ್ಯೆಗೆ ಶರಣಾದ ಅತ್ಯಾಚಾರ ಸಂತ್ರಸ್ತೆ