ETV Bharat / city

ಹಾಯ್, ಹಲೋ ಬಿಟ್ಟು ಸ್ವಚ್ಛ ಭಾರತ ಎಂದು ಶುರು ಮಾಡಿ: ಸಚಿವ ನಾರಾಯಣಗೌಡ ಕರೆ

ಹಾಯ್, ಹಲೋ ಎಂದು ಮಾತುಕತೆ ಆರಂಭಿಸುವ ಬದಲು ಸ್ವಚ್ಛ ಭಾರತ ಎಂದು ಶುರು ಮಾಡಿ ಎಂದು ವಿದ್ಯಾರ್ಥಿಗಳು, ಯುವ ಜನತೆಗೆ ಸಚಿವ ನಾರಾಯಣಗೌಡ ಕರೆ ನೀಡಿದರು.

flag-off-to-clean-india-campaign-in-hampi
ಸಚಿವ ನಾರಾಯಣಗೌಡ
author img

By

Published : Oct 28, 2021, 4:21 PM IST

ವಿಜಯನಗರ/ಹಂಪಿ: ವಿದೇಶಗಳಲ್ಲಿ ಎಲ್ಲೆಂದರಲ್ಲಿ ಕಸ ಹಾಕಿದ್ರೆ ದಂಡ, ಇಲ್ಲವೇ ಜೈಲಿಗೆ ಹಾಕುತ್ತಾರೆ. ಆದರೆ ನಮ್ಮದು ಪ್ರಜಾಪ್ರಭುತ್ವ ದೇಶ. ನಮ್ಮಲ್ಲಿ ಆ ಮಟ್ಟಕ್ಕೆ ಹೋಗುವುದು ಬೇಡ, ನಮ್ಮ ಕೆಲಸವನ್ನು ನಾವೇ ಮಾಡಬೇಕು ಎಂದು ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಕರೆ ನೀಡಿದರು.

ವಿಶ್ವಪ್ರಸಿದ್ಧ ಹಂಪಿಯ ವಿರೂಪಾಕ್ಷ ದೇವಸ್ಥಾನದ ಬಳಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ನೆಹರೂ ಯುವ ಕೇಂದ್ರ ಸಂಘಟನೆ, ಎನ್‌ಎಸ್ಎಸ್ ಮತ್ತು ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಹಯೋಗದೊಂದಿಗೆ ಕ್ಲೀನ್ ಇಂಡಿಯಾ ಅಭಿಯಾನ ನಡೆಯುತ್ತಿದ್ದು, ಸ್ವಚ್ಛ ಭಾರತ ಹಾಗೂ ಸ್ವಚ್ಛ ಹಂಪಿ ಕಾರ್ಯಕ್ರಮವನ್ನು ಸಚಿವ ನಾರಾಯಣಗೌಡ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಹಂಪಿ ವಿಶ್ವಪ್ರಸಿದ್ಧ ಸ್ಥಳ. ಇಲ್ಲಿಗೆ ದೇಶವಿದೇಶಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ದೇಶಕ್ಕೆ ಹೆಸರು ತರಬೇಕು. 100 ಜನರಿಂದ ಸಾವಿರ ಜನ, ಸಾವಿರ ಜನರಿಂದ ಹತ್ತು ಸಾವಿರ ಜನರು ಹೀಗೆ ಎಲ್ಲರೂ ಕೈಗೂಡಿಸುವುದರಿಂದ ಸ್ವಚ್ಛತಾ ಕಾರ್ಯಕ್ರಮ ಯಶಸ್ವಿ ಆಗಲಿದೆ. ನಮ್ಮ ಕಸವನ್ನು ನಾವೇ ಸಂಗ್ರಹಿಸಬೇಕು. ಆದರೆ ನಮ್ಮಲ್ಲಿ ಎಲ್ಲೆಂದರಲ್ಲಿ ಬಿಸಾಡಲಾಗುತ್ತದೆ. ಬೇರೆ ಬೇರೆ ದೇಶಗಳಲ್ಲಿ ಹೀಗೆ ಮಾಡಿದ್ರೆ ಕಠಿಣ ಶಿಕ್ಷೆ ನೀಡುತ್ತಾರೆ. ನಮ್ಮಲ್ಲಿ ಆ ಮಟ್ಟಕ್ಕೆ ಹೋಗುವುದು ಬೇಡ, ನಮ್ಮ ಕೆಲಸವನ್ನು ನಾವೇ ಮಾಡುವ ಎಂದು ಸಚಿವರು ಹೇಳಿದರು.

75 ಲಕ್ಷ ಕೆಜಿ ಪ್ಲಾಸ್ಟಿಕ್​ ಸಂಗ್ರಹದ ಗುರಿ: ದೇಶದ 744 ಜಿಲ್ಲೆಗಳಲ್ಲಿ ಅಕ್ಟೋಬರ್ 1 ರಿಂದ 31 ರವರೆಗೆ ಕ್ಲೀನ್ ಇಂಡಿಯಾ ಕ್ಯಾಂಪೇನ್ ಹಮ್ಮಿಕೊಳ್ಳಲಾಗಿದೆ‌. ಒಂದು ತಿಂಗಳ ಅವಧಿಯಲ್ಲಿ 75 ಲಕ್ಷ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಗುರಿ ಹೊಂದಲಾಗಿದೆ. ಕರ್ನಾಟಕದಲ್ಲಿ ಐದೂವರೆ ಲಕ್ಷ ಕೆಜಿ ಕೆಜಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹದ ಗುರಿ ಹೊಂದಲಾಗಿದ್ದು, ಕರ್ನಾಟಕದಲ್ಲಿ ಉತ್ತಮ ಸ್ಪಂದನೆ ಸಿಕ್ಕಿರುವುದಕ್ಕೆ ಸಚಿವ ನಾರಾಯಣಗೌಡ ಅವರು ಸಂತಸ ವ್ಯಕ್ತಪಡಿಸಿದರು.

ಹಂಪಿ ಸ್ವಚ್ಛತಾ ಅಭಿಯಾನ: ಶನಿವಾರ ಹಾಗೂ ಭಾನುವಾರದಂದು ಸಾವಿರಾರು ಪ್ರವಾಸಿಗರು ಹಂಪಿಗೆ ಬರುತ್ತಾರೆ. ಹಾಗಾಗಿ, ಪ್ರತಿ ಶುಕ್ರವಾರ ಹಂಪಿಯಲ್ಲಿ ವಿಶೇಷವಾಗಿ ಸ್ವಚ್ಛತಾ ಅಭಿಯಾನ ಕೈಗೊಳ್ಳುತ್ತೇವೆ ಎಂದು ಉಪ ವಿಭಾಗಧಿಕಾರಿ ಸಿದ್ದರಾಮೇಶ್ವರ ಅವರು ಸಚಿವ ನಾರಾಯಣಗೌಡ ಅವರಿಗೆ ತಿಳಿಸಿದರು. ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಪ್ರತಿನಿಧಿ ಪ್ರಕಾಶ್ ವೈದ್ಯ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಆಯುಕ್ತ ಗೋಪಾಲಕೃಷ್ಣ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.