ಬಳ್ಳಾರಿ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ವಿಧಾನಸಭಾ ಕ್ಷೇತ್ರದ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರಿಗೆ ಸಚಿವ ಸ್ಥಾನ ನೀಡಬೇಕೆಂದು, ಯಾದವ ಸಮಾಜದ ಹಿರಿಯ ಮುಖಂಡರಾದ ಬಿ.ಬಸವರೆಡ್ಡಿ, ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.
ನಗರದ ಮುಡ್ಲೂರು ರಾಮಪ್ಪ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗೊಲ್ಲರ ಸಮುದಾಯದ ಜನರು ರಾಜ್ಯದಲ್ಲಿ ಮೂವತ್ತು ಲಕ್ಷ ಇದ್ದಾರೆ. ಅವರಿಗೆ ಆರ್ಥಿಕ, ಶೈಕ್ಷಣಿಕ, ರಾಜಕೀಯ ಕ್ಷೇತ್ರದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯ ದೊರೆತ್ತಿಲ್ಲ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಿಧಾನಸಭಾ ಕ್ಷೇತ್ರದ ಮಾಜಿ ಸಚಿವರಾದ ದಿವಂಗತ ಎ.ಕೃಷ್ಣಪ್ಪ ಅವರ ಪುತ್ರಿ ಶೈಕ್ಷಣಿಕ ಮತ್ತು ಸಾಮಾಜಿಕ ಕ್ಷೇತ್ರದಲ್ಲಿ ಅಪಾರ ಸೇವೆಯನ್ನು ಸಲ್ಲಿಸುತ್ತಿದ್ದಾರೆ.
ಪೂರ್ಣಿಮಾ ಶ್ರೀನಿವಾಸ್ ಯಾದವ ಸಮಾಜದ ಏಕೈಕ ಶಾಸಕಿಯಾಗಿ ಆಯ್ಕೆಯಾಗಿದ್ದು, ಅವರಿಗೆ ಸಚಿವ ಸ್ಥಾನ ನೀಡಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಒತ್ತಾಯಿಸಿದ್ದಾರೆ.