ETV Bharat / city

ಕಾರವಾರ-ಬಳ್ಳಾರಿಯಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ: ಸಾಮರ್ಥ್ಯ ಪ್ರದರ್ಶಿಸಿದ ನೌಕರರು

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಜಿಲ್ಲೆಯ ನಾನಾ ತಾಲೂಕುಗಳಿಂದ ಅಂದಾಜು 2 ಸಾವಿರಕ್ಕೂ ಅಧಿಕ ಮಂದಿ ಸರ್ಕಾರಿ ನೌಕರರು ಭಾಗಿಯಾಗಿದ್ದರು.

government-employees-sporting-event-in-karwar-bellary
ಕಾರವಾರ-ಬಳ್ಳಾರಿಯಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ
author img

By

Published : Feb 12, 2021, 3:51 PM IST

ಕಾರವಾರ\ಬಳ್ಳಾರಿ: ಕೋವಿಡ್​​​​​ನಿಂದಾಗಿ ಮುಂದೂಡಲ್ಪಟ್ಟಿದ್ದ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಎರಡು ಜಿಲ್ಲೆಯಲ್ಲಿ ವಿದ್ಯುಕ್ತವಾಗಿ ಚಾಲನೆ ನೀಡಿಲಾಯಿತು.

ಕಾರವಾರ-ಬಳ್ಳಾರಿಯಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ

ಓದಿ: ಸಿದ್ದರಾಮಯ್ಯ ಸ್ವತಂತ್ರ ಪಕ್ಷ ಕಟ್ಟಿ ಐದು ಸ್ಥಾನ ಗೆದ್ದು ತೋರಿಸಲಿ: ಹೆಚ್​ಡಿಕೆ ಸವಾಲ್​!​

ಕಾರವಾರ ನಗರದ ಮಾಲಾದೇವಿ ಮೈದಾನದಲ್ಲಿ‌‌ ಆಯೋಜಿಸಲಾಗಿದ್ದ ಎರಡು ದಿನದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಜಯಶ್ರೀ ಮೊಗೇರ ಬಳಿಕ ಪಾರಿವಾಳವನ್ನು ಹಾರಿ ಬಿಟ್ಟು ಕ್ರೀಡಾ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.

government-employees-sporting-event-in-karwar-bellary
ಕಾರವಾರ-ಬಳ್ಳಾರಿಯಲ್ಲಿ ಸರ್ಕಾರಿ ನೌಕರರ ಕ್ರೀಡಾಕೂಟ

ಇನ್ನು ಎರಡು ದಿನ ನಡೆಯುವ ಕ್ರೀಡಾಕೂಟಕ್ಕೆ ಜಿಲ್ಲೆಯ 12 ತಾಲೂಕುಗಳ ಮಹಿಳಾ ಹಾಗೂ ಪುರುಷ ಸರ್ಕಾರಿ ನೌಕರರು ಭಾಗವಹಿಸಿದ್ದಾರೆ. ಮೊದಲ ದಿನವಾದ ಇಂದು ಗುಂಡು ಎಸೆತ, ಎತ್ತರ ಜಿಗಿತ, ಉದ್ದ ಜಿಗಿತ ಸೇರಿದಂತೆ ಇನ್ನಿತರ ಸ್ಪರ್ಧೆಗಳನ್ನು ಯುವ ನೌಕರರು ಹಾಗೂ ವಯಸ್ಸಾದವರಿಗೆ ಪ್ರತ್ಯೇಕವಾಗಿ ನಡೆಸಲಾಯಿತು.

ರನ್ನಿಂಗ್, ವಾಲಿಬಾಲ್, ಬ್ಯಾಡ್ಮಿಂಟನ್ ಸೇರಿದಂತೆ ಇನ್ನಿತರ ಸ್ಪರ್ಧೆಗಳು ನಾಳೆ ನಡೆಯಲಿವೆ. ಇದಲ್ಲದೆ ಜಿಲ್ಲಾ ರಂಗಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಕೂಡ ನಡೆಸಲಾಗುತ್ತಿದೆ. ಇನ್ನು ಕ್ರೀಡಾಕೂಟದಲ್ಲಿ ವಯಸ್ಸಾದವರು, ಮಹಿಳೆಯರು ಉತ್ಸಾಹದಿಂದ ಭಾಗವಹಿಸಿದ್ದು, ಕ್ರೀಡಾಕೂಟದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸುವ ಮೂಲಕ ಎಲ್ಲರ ಗಮನ ಸೆಳೆದರು.

ಬಳ್ಳಾರಿಯಲ್ಲಿ ಸಂಭ್ರಮ-ಸಡಗರ:

ಬಳ್ಳಾರಿ ಜಿಲ್ಲಾ ಕ್ರೀಡಾಂಗಣದಲ್ಲಿಂದು ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಿಗೆ ಬಳ್ಳಾರಿ ನಗರ ಶಾಸಕ ಗಾಲಿ ಸೋಮಶೇಖರ ರೆಡ್ಡಿ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ವತಿಯಿಂದ ಆಯೋಜಿಸಿದ್ದ ಜಿಲ್ಲಾಮಟ್ಟದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಜಿಲ್ಲೆಯ ನಾನಾ ತಾಲೂಕುಗಳಿಂದ ಅಂದಾಜು 2 ಸಾವಿರಕ್ಕೂ ಅಧಿಕ ಮಂದಿ ಸರ್ಕಾರಿ ನೌಕರರು ಭಾಗಿಯಾಗಿದ್ದರು.

ಗಣಿ ಜಿಲ್ಲೆಯ ಸಂಡೂರು, ಸಿರುಗುಪ್ಪ, ಹರಪನಹಳ್ಳಿ, ಬಳ್ಳಾರಿ, ಕುರುಗೋಡು‌, ಹಡಗಲಿ, ಹೊಸಪೇಟೆ, ಕೂಡ್ಲಿಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ತಾಲೂಕುಗಳಿಂದ ನೂರಾರು ಮಂದಿ ನೌಕರರು ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.