ಬಳ್ಳಾರಿ: ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ 9ನೇ ಘಟಿಕೋತ್ಸವ ವಿವಿಯ ಬಯಲು ರಂಗಮಂದಿರದ ಆವರಣದಲ್ಲಿ ಜರುಗಿತು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅಧ್ಯಕ್ಷತೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮೂವರು ಮಹನೀಯರಿಗೆ ಗೌರವ ಡಾಕ್ಟರೆಟ್ ಪ್ರದಾನ ಮಾಡಲಾಯಿತು.
ಉದ್ಯಮಿ ಮತ್ತು ಸಮಾಜ ಸೇವಕ ನರೇಂದ್ರ ಬಲ್ಡೋಟ, ಕನ್ನಡದ ಅರ್ಚಕ ಮತ್ತು ಸಾಹಿತಿ ಹಿರೇಮಗಳೂರು ಕಣ್ಣನ್ ಹಾಗೂ ವಕೀಲ ವೀರಶೈವ ಮಹಾಸಭೆಯ ಅಧ್ಯಕ್ಷ ಎನ್.ತಿಪ್ಪಣ್ಣ ಅವರಿಗೆ ಗೌರವ ಡಾಕ್ಟರೆಟ್ ಪದವಿ ನೀಡಿ ಗೌರವಿಸಲಾಯಿತು.
ಬಳಿಕ ಮಾತನಾಡಿದ ರಾಜ್ಯಪಾಲರು, ವಿಶ್ವವಿದ್ಯಾಲಯದಿಂದ ಕೊಡಮಾಡುವ ಡಾಕ್ಟರೆಟ್ ಪದವಿಗಳು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಬೇಕು. ಈ ಎಲ್ಲ ಮಹನೀಯರ ಹಾಗೆಯೇ ವಿದ್ಯಾರ್ಥಿಗಳು ಸಾಧನೆ ಮಾಡುವಂತೆ ಕರೆ ನೀಡಿದರು. ಕುರುಕ್ಷೇತ್ರ ವಿವಿಯ ವಿಶ್ರಾಂತ ಕುಲಪತಿ ಡಾ.ಕೈಲಾಶ್ ಚಂದ್ರಶರ್ಮ ಘಟಿಕೋತ್ಸವ ಭಾಷಣ ಮಾಡಿದರು. ಇದೇ ವೇಳೆ 42 ವಿದ್ಯಾರ್ಥಿಗಳಿಗೆ 51 ಚಿನ್ನದ ಪದಕ, 26 ವಿದ್ಯಾರ್ಥಿಗಳಿಗೆ ಪಿಹೆಚ್ಡಿ ನೀಡಲಾಗಿದೆ.