ಹೊಸಪೇಟೆ : ವಿಜಯನಗರ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಕಮಾರನಹಳ್ಳಿ ತಾಂಡದಲ್ಲಿ ಬುಧವಾರ ರಾತ್ರಿ ಸುರಿದ ಬಿರುಗಾಳಿ ಮಳೆಯಿಂದ ಹಲವು ಮನೆಗಳಿಗೆ ಹಾನಿಯುಂಟಾಗಿದೆ. ಜೊತೆಗೆ ಹಲವು ಮರಗಳು ಹಾಗೂ ವಿದ್ಯುತ್ ಕಂಬಗಳು ಧರೆಗುರುಳಿವೆ.
ಬಿರುಗಾಳಿ ಮಳೆಗೆ 10ಕ್ಕೂ ಮನೆಗಳಿಗೆ ಹಾನಿಯುಂಟಾಗಿದ್ದು, ಈ ಪೈಕಿ ಕೆಲ ಮನೆಗಳು ಭಾಗಶಃ ನೆಲಕಚ್ಚಿವೆ. ಗಾಳಿಯ ವೇಗಕ್ಕೆ ಕೆಲ ಮನೆಗಳ ತಗಡುಗಳು ಹಾರಿಹೋಗಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿವೆ.
ಹಲವು ಮನೆಗಳ ಮೇಲೆ ಮರಗಳು ಉರುಳಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಮಾಜಿ ಸಂಸದ ಜಿ. ಮಾದೇಗೌಡರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ