ಬಳ್ಳಾರಿ: ಹೂವಿನಹಡಗಲಿ ತಾಲೂಕಿನ ನವಲಿ ಗ್ರಾಮದಲ್ಲಿ ಪತಿಯೇ ತಾನು ತಾಳಿ ಕಟ್ಟಿದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ ಕೊಲೆಗೈದಿರುವ ಘಟನೆ ನಡೆದಿದೆ.
ನವಲಿ ಗ್ರಾಮದ ಹನುಮವ್ವ (35) ಕೊಲೆಯಾದ ಮಹಿಳೆಯೆಂದು ಗುರುತಿಸಲಾಗಿದೆ. ಮರಿಯಪ್ಪ (40) ಕೊಲೆ ಮಾಡಿದ್ದು, ಪೊಲೀಸರಿಗೆ ಶರಣಾಗಿದ್ದಾನೆ.
ತನ್ನ ಪತ್ನಿಯು ಬೇರೊಬ್ಬನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಅನುಮಾನಗೊಂಡ ಪತಿರಾಯ ಇಂದು ಬೆಳಗಿನ ಜಾವ ಮನೆಯಲ್ಲೇ ಮಲಗಿಕೊಂಡಿದ್ದ ಪತ್ನಿ ಹನುಮವ್ವ ಕತ್ತನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಈ ವಿಷಯ ತಿಳಿದ ಹೂವಿನಹಡಗಲಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.