ETV Bharat / city

ಬಳ್ಳಾರಿಯಲ್ಲಿ 13 ಕೊರೊನಾ​ ಜೊತೆಗೆ 110 ಡೆಂಗ್ಯೂ ಪ್ರಕರಣ... ಗಣಿ ನಾಡಿಗೆ ಗಾಯದ ಮೇಲೆ ಬರೆ

author img

By

Published : Apr 27, 2020, 10:07 AM IST

ಬಳ್ಳಾರಿ ಜಿಲ್ಲೆಯಲ್ಲಿ ಕೊರೊನಾ ವೈರಸ್​ ಪಾಸಿಟಿವ್ ಪ್ರಕರಣಗಳು ಕೇವಲ 13 ಕಂಡು ಬಂದ್ರೆ, ಡೆಂಗ್ಯೂ ಪ್ರಕರಣಗಳು 110 ಕಂಡುಬಂದಿವೆ. ಹೀಗಾಗಿ ಆರೋಗ್ಯ ಇಲಾಖೆಗೆ ಈ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸುವುದೇ ದೊಡ್ಡ ಸವಾಲಾಗಿದ್ದು, ಇಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದಾರೆ.

ಈಟಿವಿ ಭಾರತದೊಂದಿಗೆ ಮಾತನಾಡಿದ  ಡಾ.ಹೆಚ್.ಎಲ್. ಜನಾರ್ದನ

ಬಳ್ಳಾರಿ: ಲಾಕ್​ಡೌನ್ ಎಫೆಕ್ಟ್​ನಿಂದ ಜಿಲ್ಲಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿದ್ದು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಡೆಂಗ್ಯೂ ನಿಯಂತ್ರಣವೇ ದೊಡ್ಡ ಸವಾಲಾಗಿದೆ.

ಜಿಲ್ಲೆಯಲ್ಲಿ ಕೊರೊನಾ ವೈರಸ್​ ಪಾಸಿಟಿವ್ ಪ್ರಕರಣಗಳು ಕೇವಲ 13 ಕಂಡುಬಂದ್ರೆ, 110 ಡೆಂಗ್ಯೂ ಪ್ರಕರಣಗಳು ಕಂಡುಬಂದಿವೆ. ಹೀಗಾಗಿ ಆರೋಗ್ಯ ಇಲಾಖೆಗೆ ಈ ಡೆಂಗ್ಯೂ ಪ್ರಕರಣಗಳನ್ನು ನಿಯಂತ್ರಿಸುವುದೇ ದೊಡ್ಡ ಸವಾಲಾಗಿದೆ. ಕೊರೊನಾ ವೈರಸ್ ತಡೆಗಾಗಿ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಂಡಿದ್ದು, ಡೆಂಗ್ಯೂ ಪ್ರಕರಣಗಳ ನಿಯಂತ್ರಣದಲ್ಲಿ ನಿರ್ಲಕ್ಷ್ಯ ತೋರಿದ್ದರಿಂದಲೇ ಇಷ್ಟೊಂದು ಪ್ರಮಾಣದ ಕೇಸ್​ಗಳ ಪತ್ತೆಯಾಗಿದೆ ಎನ್ನಲಾಗಿದೆ.

ಈ ಕುರಿತು ಈಟಿವಿ ಭಾರತದೊಂದಿಗೆ ಡಿಹೆಚ್ಓ ಡಾ.ಹೆಚ್.ಎಲ್. ಜನಾರ್ದನ ಅವರು ಮಾತನಾಡಿ, ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿವೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಮನೆಯಲ್ಲೇ ಜಾಸ್ತಿ ಉಳಿದುಕೊಂಡಿರುವುದರಿಂದ ನೀರಿನ ಸಂಗ್ರಹಣೆ ಹೆಚ್ಚಾಗಿ ಇದರಿಂದ ಸೊಳ್ಳೆಗಳ ಉತ್ಪತ್ತಿಯಾಗಿವೆ ಎಂಬ ಅಂಶ ಬೆಳಕಿಗೆ ಬಂದಿದೆ. ಹೀಗಾಗಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರ ಅಧ್ಯಕ್ಷತೆಯಲ್ಲಿ ಇಂದು ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ ಅವರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಯಲಿದ್ದು, ಆಯಾ ತಾಲೂಕಿನ‌ ಟಿಹೆಚ್​ಓ ಗಳು ಯಾವ ರೀತಿಯಾಗಿ ಈ ಡೆಂಗ್ಯೂ ನಿಯಂತ್ರಣಕ್ಕೆ ಕ್ರಮಕೈಗೊಳ್ಳಬೇಕು, ಕ್ಷೇತ್ರಗಳ ಭೇಟಿ ಯಾವ ರೀತಿಯಾಗಿ ನಡೆಯಬೇಕು, ಮನೆಗಳ ಸರ್ವೇ ಕಾರ್ಯ ಯಾವ ರೀತಿಯಾಗಿ ನಡೆಯಬೇಕೆಂಬುದರ ಕುರಿತ ಚರ್ಚಿಸಲಾಗುವುದು ಎಂದರು.

ಇನ್ನು ಜಿಲ್ಲೆಯಲ್ಲಿ 110 ಡೆಂಗ್ಯೂ ಪ್ರಕರಣಗಳು ಕಂಡುಬಂದಿವೆ. ಆದರೆ ಈವರೆಗೂ ಸಾವು ಕಂಡುಬಂದಿಲ್ಲ. ಸಂಡೂರು, ಕೂಡ್ಲಿಗಿ, ಹರಪನಹಳ್ಳಿ ಹಾಗೂ ಬಳ್ಳಾರಿ ತಾಲೂಕುಗಳಲ್ಲಿ ಈ ಪ್ರಕರಣಗಳು ಹೆಚ್ಚಾಗಿ ಕಂಡುಬಂದಿವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.