ETV Bharat / city

ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಲಾಕ್​ಡೌನ್ ಬೇಡ: ಶ್ರೀರಾಮುಲು - ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಲಾಕ್​ಡೌನ್ ಬೇಡ

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿರುವ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಿ. ಆದರೆ, ರಾಜ್ಯದಲ್ಲಿ ಲಾಕ್​ಡೌನ್ ಬೇಡ. ಲಾಕ್​​ಡೌನ್​ ಜಾರಿಯಿಂದ ಜನಸಾಮಾನ್ಯರು ಹಾಗೂ ವ್ಯಾಪಾರಸ್ಥರಿಗೆ ತೊಂದರೆಯಾಗುವುದಾಗಿ ಈಗಾಗಲೇ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿರುವೆ ಎಂದು ಸಚಿವ ಬಿ.ಶ್ರೀರಾಮುಲು ಹೇಳಿದರು.

Minister B. Sriramulu
ಸಚಿವ ಬಿ.ಶ್ರೀರಾಮುಲು
author img

By

Published : Apr 16, 2021, 11:53 AM IST

ಬಳ್ಳಾರಿ: ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಲಾಕ್​ಡೌನ್ ಮಾಡೋದು ಬೇಡ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅಭಿಪ್ರಾಯಪಟ್ಟಿದ್ದಾರೆ.

ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ವಿವಿಧ ವಾರ್ಡ್​ಗಳ ಬಿಜೆಪಿಯ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿರುವ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಿ. ಆದರೆ, ರಾಜ್ಯದಲ್ಲಿ ಲಾಕ್​ಡೌನ್ ಮಾಡೋದು ಬೇಡ. ಲಾಕ್​​ಡೌನ್​ ಜಾರಿಯಿಂದ ಜನಸಾಮಾನ್ಯರು, ವ್ಯಾಪಾರಸ್ಥರಿಗೆ ತೊಂದರೆಯಾಗುತ್ತದೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿರುವೆ. ಕೊರೊನಾ ನಿಯಂತ್ರಣದ ಕುರಿತು ಸಿಎಂ ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ವಿಪಕ್ಷ ನಾಯಕರ ಸಲಹೆಗಳನ್ನೂ ಕೂಡ ಪಡೆಯಲಾಗುವುದು. ಜನರು ಕೊರೊನಾ ನಿಯಮಗಳನ್ನು ಪಾಲಿಸಬೇಕು. ಕೊರೊನಾ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ ಎಂದರು.

ಉಪ ಚುನಾವಣೆ ವಿಚಾರ

ಉಪಚುನಾವಣೆಗಳ್ಲಿ ಬಿಜೆಪಿ ಗೆಲುವು ನಿಶ್ಚಿತ. ಕಾಂಗ್ರೆಸ್ ನಾಯಕರು ಸೋಲಿನ ಭೀತಿಯಿಂದ ಕೀಳುಮಟ್ಟದ ಮಾತನಾಡುತ್ತಿದ್ದಾರೆ. ಈ ದೇಶದಲ್ಲಿ ಕಾಂಗ್ರೆಸ್ ಆಸ್ತಿತ್ವ ಕಳೆದುಕೊಂಡಿದೆ‌. ಬಳ್ಳಾರಿ ಮಹಾನಗರ ಪಾಲಿಕೆಯ 36 ವಾರ್ಡ್​ಗಳಲ್ಲು ಬಿಜೆಪಿ ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು.

ಇದನ್ನೂ ಓದಿ: ರಾಜ್ಯದ 8 ನಗರಗಳಲ್ಲಿ ಕೊರೊನಾ ಕರ್ಫ್ಯೂ ಏಪ್ರಿಲ್ 20 ರವರೆಗೂ ಮುಂದುವರಿಕೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.