ETV Bharat / city

ತುಂಗಭದ್ರಾ ಜಲಾಶಯದ ಒಳಹರಿವು ಹೆಚ್ಚಳ: ನದಿಗೆ 1 ಲಕ್ಷಕ್ಕೂ ಹೆಚ್ಚು ಕ್ಯೂಸೆಕ್‌ ನೀರು ಬಿಡುಗಡೆ

author img

By

Published : Aug 8, 2022, 7:37 AM IST

ಮಲೆನಾಡಿನಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ತುಂಗಭದ್ರಾ ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆ ಕಂಡಿದ್ದು, ಭಾನುವಾರ 1,09,214 ಕ್ಯೂಸೆಕ್​ ನೀರು ನದಿಗೆ ಹರಿಬಿಡಲಾಗಿದೆ.

Tungabhadra
ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ

ವಿಜಯನಗರ: ಮಲೆನಾಡು ಪ್ರದೇಶದಲ್ಲಿ‌ ಸತತ ಮಳೆ ಸುರಿಯುತ್ತಿರುವ ಪರಿಣಾಮ ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದ್ದು, ನದಿಗೆ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್‌ ನೀರು ಹರಿಬಿಡಲಾಗಿದೆ.

ಭಾನುವಾರ ಜಲಾಶಯಕ್ಕೆ 1,09,214 ಕ್ಯೂಸೆಕ್​ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಜಲಾಶಯದ 33 ಗೇಟ್‌ಗಳ ಪೈಕಿ 30 ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲಾಗಿದೆ. 20 ಕ್ರಸ್ಟ್‌ ಗೇಟ್​ ಗಳನ್ನು 2.50 ಅಡಿ, 10 ಗೇಟ್​ಗಳನ್ನು 1.50 ಅಡಿ ಎತ್ತರಕ್ಕೆ ತೆರೆದು ಹೆಚ್ಚುವರಿ ನೀರು ಹರಿಬಿಡಲಾಗಿದೆ.

101.343 ಟಿಎಂಸಿ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಸದ್ಯಕ್ಕೆ ಹೊರ ಹರಿವೂ ಕೂಡ ಹೆಚ್ಚುತ್ತಿದೆ. ಹೀಗಾಗಿ, ವಿಶ್ವವಿಖ್ಯಾತ ಹಂಪಿಯ ಪುರಂದರ ಮಂಟಪ ಮುಳುಗಡೆಯಾಗಿದೆ. ರಾಮಲಕ್ಷಣ ದೇವಸ್ಥಾನಕ್ಕೆ ಹೋಗುವ ದಾರಿ ಮತ್ತೆ ಜಲಾವೃತವಾಗಿದ್ದು, ನದಿಗೆ ಭಾರಿ ಪ್ರಮಾಣದಲ್ಲಿ ನೀರು ಹರಿಸಿರುವುದರಿಂದ ನದಿಪಾತ್ರದಲ್ಲಿ ಪ್ರವಾಹ ಸ್ಥಿತಿ ಉಂಟಾಗಿದೆ. ನದಿ ಸುತ್ತಮುತ್ತ ಭದ್ರತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ.

ಇದನ್ನೂ ಓದಿ: ತುಂಬಿ ಹರಿದ ತುಂಗಭದ್ರಾ.. ನಿಷೇಧಿತ ಪ್ರದೇಶದಲ್ಲಿ ಮಿತಿ ಮೀರಿದ ಜನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.