ಬಳ್ಳಾರಿ: ಗಣಿನಾಡಿನ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್ನಲ್ಲಿ ಸೇವೆಯಲ್ಲಿ ತೊಡಗಿಕೊಂಡಿದ್ದ ಪುರುಷ ಸ್ಟಾಫ್ ನರ್ಸ್ವೊಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇದೀಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.
ಜಿಲ್ಲೆಯಲ್ಲಿ ಈವರೆಗೆ 15 ಮಂದಿ ಗುಣಮುಖರಾಗಿದ್ದು, ಕೇವಲ ಒಬ್ಬರು ಮಾತ್ರ ಸಾವನ್ನಪ್ಪಿದ್ದಾರೆ. ಐಸೋಲೇಷನ್ನಲ್ಲಿ 21 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೋಲೇಷನ್ನಲ್ಲಿ ಕೊರೊನಾ ವಾರಿಯರ್ ಆಗಿ ಸೇವೆಯಲ್ಲಿ ತೊಡಗಿಕೊಂಡಿದ್ದ 14 ಮಂದಿಯ ಗಂಟಲು ದ್ರವ ಮತ್ತು ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ಪೈಕಿ 13 ಮಂದಿಯ ವರದಿ ನೆಗೆಟಿವ್ ಬಂದಿದ್ದು, ಕೇವಲ ಒಂದು ಮಾತ್ರ ಪಾಸಿಟಿವ್ ಬಂದಿದೆ. ಈ ಕುರಿತು ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.