ಕಲಬುರಗಿ: ಜಿಲ್ಲೆಯ ವಿವಿಧೆಡೆ ವರುಣಾರ್ಭಟ ಮುಂದುವರೆದಿದೆ. ಪರಿಣಾಮ ನಗರದ ಆರ್ಚಿಡ್ ಮಾಲ್, ಸೂಪರ್ ಮಾರ್ಕೆಟ್ ರಸ್ತೆ ಸಂಪೂರ್ಣ ಜಲಮಯವಾಗಿತ್ತು. ಚರಂಡಿ ಭರ್ತಿಯಾಗಿ ರಸ್ತೆ ಮೇಲೆ ನೀರು ನಿಂತಿದ್ದರಿಂದ ಟ್ರಾಫಿಕ್ ಜಾಮ್ ಉಂಟಾಗಿ ವಾಹನ ಸವಾರರು ತೀವ್ರ ತೊಂದರೆ ಅನುಭವಿಸಿದರು.
ಕಳೆದ ಎರಡು ಮೂರು ದಿನಗಳಿಂದ ನಗರದಲ್ಲಿ ಜಿಟಿಜಿಟಿ ಮಳೆ ಸುರಿಯುತ್ತಿದ್ದು, ಏಕಾಏಕಿ ಮಳೆರಾಯ ಅಬ್ಬರಿಸಿ ಬೊಬ್ಬಿರಿದಿದ್ದಾನೆ. ಅಂಗಡಿ ಮುಂಗಟ್ಟುಗಳಿಗೆ ನೀರು ಹಾಕಿದ್ದಲ್ಲದೇ ನಗರದ ಬಹುಪಾಲು ಪ್ರದೇಶಗಳಲ್ಲಿ ನೀರು ಶೇಖರಣೆಗೊಂಡು ಜನ ಪರದಾಡಿದ ಪ್ರಸಂಗ ನಡೆಯಿತು.
ವಿಜಯನಗರ: ತುಂಗಾ ಜಲಾಶಯದಿಂದ ನದಿಗೆ 59 ಕ್ಯೂಸೆಕ್ ನೀರು ಬಿಡಲಾಗಿದೆ. ಜೊತೆಗೆ ಶಿವಮೊಗ್ಗ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬರುತ್ತಿದ್ದು, ನದಿಪಾತ್ರದ ವಿಜಯನಗರ ಜಿಲ್ಲೆಯ ಜನರು ಮುಂಜಾಗ್ರತೆ ವಹಿಸಲು ಜಿಲ್ಲಾಡಳಿತ ಸೂಚಿಸಿದೆ.
ನದಿಪಾತ್ರಕ್ಕೆ ತೆರಳದೇ ಜನರು ಎಚ್ಚರಿಕೆ ವಹಿಸಬೇಕು. ಮೀನುಗಾರರು ನದಿಗೆ ಇಳಿಯಬಾರದು. ಅಗತ್ಯ ಇರುವ ಕಡೆ ಕಾಳಜಿ ಕೇಂದ್ರ ತೆರೆಯಬೇಕು. ನದಿಪಾತ್ರದ ಊರುಗಳ ಜನರು ಎಚ್ಚರಿಕೆ ವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಮಹೇಶ್ಬಾಬು ಅಲರ್ಟ್ ಸಂದೇಶ ರವಾನಿಸಿದ್ದಾರೆ.
ಓದಿ: PSI ಅಕ್ರಮ ಪ್ರಕರಣ ನ್ಯಾಯಾಂಗ ತನಿಖೆಗೆ ವಹಿಸುವ ಪ್ರಶ್ನೆಯೇ ಇಲ್ಲ: ಸಿಎಂ