ಹೊಸಪೇಟೆ: ನೂತನ ವಿಜಯನಗರ ಜಿಲ್ಲೆ ಉದ್ಘಾಟನೆಯ ಸಂಭ್ರಮದ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಇಲ್ಲವೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಆಹ್ವಾನಿಸಲಾಗುವುದು. ಇತಿಹಾಸದ ಪುಟದಲ್ಲಿ ದಾಖಲಾಗುವಂತೆ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ಮೂಲಸೌಕರ್ಯ ಅಭಿವೃದ್ಧಿ, ಹಜ್ ಮತ್ತು ವಕ್ಫ್ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.
ತಾಲೂಕಿನ ಗಾಳೆಮ್ಮನಗುಡಿ ದೇವಸ್ಥಾನದ ಬಳಿ ವಿಜಯನಗರ ಕ್ಷೇತ್ರದ ಜನತೆ ಹಮ್ಮಿಕೊಂಡಿದ್ದ ಸನ್ಮಾನ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ವಿಜಯನಗರ ಜಿಲ್ಲೆ ರಚನೆ ಒಂದು ಐತಿಹಾಸಿಕ ನಿರ್ಣಯವಾಗಿದೆ. ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಜಿಲ್ಲೆ ರಚನೆಯಾಗಿದೆ ಎಂದರು.
ಭವ್ಯ ವೇದಿಕೆ: ವಿಜಯನಗರ ಜಿಲ್ಲೆ ಉದ್ಘಾಟನೆಯ ಸಮಾರಂಭಕ್ಕೆ ಹೊಸಪೇಟೆ ನಗರದ ಮುನ್ಸಿಪಲ್ ಮೈದಾನದಲ್ಲಿ ಭವ್ಯ ವೇದಿಕೆ ನಿರ್ಮಿಸಲಾಗುವುದು. ವೇದಿಕೆ ಮೂಲಕ ವಿಜಯನಗರದ ಹಿಂದೂ ಸಾಮ್ರಾಜ್ಯದ ಪರಂಪರೆಯನ್ನು ಸಾರುವ ಕಾರ್ಯ ಮಾಡಲಾಗುವುದು. ವಿಜಯನಗರದ ಇತಿಹಾಸ ಕಟ್ಟಿಕೊಡಲಾಗುವುದು. ವೇದಿಕೆ ನಿರ್ಮಾಣಕ್ಕೆ ಎರಡು ತಿಂಗಳಷ್ಟು ಸಮಯ ಹಿಡಿಯಲಿದೆ. ಈ ಭವ್ಯ ವೇದಿಕೆ ನಿರ್ಮಾಣ ಕಾರ್ಯದಲ್ಲಿ ಒಂದರಿಂದ ಎರಡು ಸಾವಿರ ಕಾರ್ಮಿಕರು ಕೆಲಸ ಮಾಡಲಿದ್ದಾರೆ ಎಂದರು.
ಓದಿ: 'ಬಾಂಬೆ ತಂಡ'ದ ಸದಸ್ಯರ ಕ್ಷೇತ್ರಗಳು ಅಭಿವೃದ್ಧಿಯಾದವೇ?; ಎಚ್ಡಿಕೆ ವಾಗ್ದಾಳಿ