ETV Bharat / city

ಬಳ್ಳಾರಿ: ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ

ಬ್ರೂಸಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ವಾರ್ಡ್​ ನಂಬರ್ 32ರಲ್ಲಿ ಕೆಲಸ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ರಾಮಕ್ಕ ಅವರಿಗೆ ನೋಟಿಸ್ ನೀಡದೆ ಕೆಲಸದಿಂದ ವಜಾ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.

author img

By

Published : Dec 18, 2020, 6:39 PM IST

ಆಶಾ ಕಾರ್ಯಕರ್ತೆಯರ ಪ್ರತಿಭಟನೆ
ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಬಳ್ಳಾರಿ: ನೋಟಿಸ್​ ನೀಡದೆ ಆಶಾ ಕಾರ್ಯಕರ್ತೆ ರಾಮಕ್ಕ ಎನ್ನುವರನ್ನು ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಕರ್ನಾಟಕ ರಾಜ್ಯ ಆಶಾ ಸಂಯುಕ್ತ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

ಈ ಕುರಿತು ಈಟಿವಿ ಭಾರತದೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ಬ್ರೂಸಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ವಾರ್ಡ್​ ನಂಬರ್ 32ರಲ್ಲಿ ಆಶಾ ಕಾರ್ಯಕರ್ತೆ ರಾಮಕ್ಕ ಅವರು ಕಳೆದ 4 ವರ್ಷಗಳಿಂದ ಕೆಲಸ ಮಾಡುತ್ತಾ ಬಂದಿದ್ದಾರೆ. ಏಕಾಏಕಿ ನೋಟಿಸ್ ಸಹ​ ನೀಡದೆ ಅವರನ್ನು ಕೆಲಸದಿಂದ ವಜಾ ಮಾಡಿದ್ದಾರೆ ಎಂದು ಆರೋಪಿಸಿದರು.

ಕೆಲಸ ಸರಿಯಾಗಿ ಮಾಡಿಲ್ಲ ಎನ್ನುವ ಕಾರಣದಿಂದ ವಜಾ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಆದ್ರೆ ವಜಾ ಮಾಡಿರುವ ಕ್ರಮವು ಸಂಪೂರ್ಣವಾಗಿ ನಿಯಮ ಬಾಹಿರವಾಗಿದೆ. ಆಶಾ ಕಾರ್ಯಕರ್ತೆ ಸರಿಯಾಗಿ ಕಾರ್ಯನಿರ್ವಹಿಸಿಲ್ಲವೆಂದರೆ 3 ಬಾರಿ ನೋಟಿಸ್ ಕೊಡಬೇಕೆಂದು ಸರ್ಕಾರದ ಆದೇಶವಿದೆ. ರಾಮಕ್ಕನಿಗೆ ಯಾವುದೇ ನೋಟಿಸ್ ನೀಡದೆ ವಜಾ ಮಾಡಲಾಗಿದೆ. ರಾಮಕ್ಕನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.