ETV Bharat / city

ತೈಲ ಬೆಲೆ ಏರಿಕೆ ಖಂಡಿಸಿ ಬಳ್ಳಾರಿಯಲ್ಲಿ ಪ್ರತಿಭಟನೆ - oil price hike

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್, ಡಿಸೇಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ದರವನ್ನು ನಿರೀಕ್ಷೆಗೂ ಮೀರಿ ಹೆಚ್ಚಳ ಮಾಡಿದ್ದು ಇದರಿಂದಾಗಿ ಶ್ರೀಸಾಮಾನ್ಯರಿಗೆ ತೊಂದರೆ ಉಂಟಾಗಿದೆ ಎಂದು ಆರೋಪಿಸಿ, ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಲಾಯಿತು.

Protest
Protest
author img

By

Published : Feb 27, 2021, 2:38 PM IST

ಬಳ್ಳಾರಿ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯನ್ನು ಖಂಡಿಸಿ ಕೆಪಿಸಿಸಿ ಕರೆ ನೀಡಿದ್ದ ರಾಜ್ಯವ್ಯಾಪಿ ಪ್ರತಿಭಟನೆಗೆ ಬಳ್ಳಾರಿಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.

ಬೆಲೆ ಏರಿಕೆ ಖಂಡಿಸಿ ಬಳ್ಳಾರಿಯಲ್ಲಿ ಪ್ರತಿಭಟನೆ

ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಜಿ.ಎಸ್‌. ಮಹಮ್ಮದ್​ ರಫೀಕ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಜಿಲ್ಲಾ ಪಂಚಾಯತಿ ಸದಸ್ಯ ಎನ್. ಭರತ ರೆಡ್ಡಿ, ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಪ್ರಧಾನ ಕಾರ್ಯದರ್ಶಿ ಮುಂಡ್ಲೂರು ಹನುಮ ಕಿಶೋರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತ, ಮುಖಂಡರು ಬಳ್ಳಾರಿ ನಗರದ ಗಡಿಗಿ ಚನ್ನಪ್ಪ ವೃತ್ತದ ಬಳಿ ಜಮಾಯಿಸಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಂಸದ ಉಗ್ರಪ್ಪ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ಸೇರಿದಂತೆ ಅಗತ್ಯ ವಸ್ತುಗಳ ದರವನ್ನು ನಿರೀಕ್ಷೆಗೂ ಮೀರಿ ಹೆಚ್ಚಳ ಮಾಡಿದ್ದು ಇದರಿಂದ ಶ್ರೀಸಾಮಾನ್ಯರಿಗೆ ತೊಂದರೆ ಉಂಟಾಗಿದೆ. ಹಾಗಾಗಿ, ಈ ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಬೆಲೆ ಇಳಿಕೆ ಮಾಡಬೇಕು. ಇಲ್ಲದಿದ್ದರೆ ಕಾಂಗ್ರೆಸ್ ಪಕ್ಷವು ದೇಶವ್ಯಾಪಿ ಹೋರಾಟವನ್ನು ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.