ಬಳ್ಳಾರಿ: ರಾಜ್ಯದಲ್ಲಿ ಗೊಲ್ಲ ಸಮುದಾಯ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ, ಸಂಸ್ಕೃತಿಕ ಹಾಗೂ ರಾಜಕೀಯವಾಗಿ ಹಿಂದುಳಿದಿದೆ. ರಾಜ್ಯದ ಏಕೈಕ ಗೊಲ್ಲ ಸಮುದಾಯದ ಶಾಸಕಿ ಪೂರ್ಣಿಮಾ ಶ್ರೀನಿವಾಸರಾಗಿದ್ದಾರೆ. ಹಾಗಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ಸ್ಥಾನವನ್ನು ಅವರಿಗೆ ನೀಡಬೇಕೆಂದು ಬಳ್ಳಾರಿ ಜಿಲ್ಲಾ ಗೊಲ್ಲ ಸಮುದಾಯ ಮನವಿ ಮಾಡಿದೆ.
ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ಈಟಿವಿ ಭಾರತದೊಂದಿಗೆ ಮಾತನಾಡಿದ ಬಳ್ಳಾರಿ ಜಿಲ್ಲಾ ಗೊಲ್ಲರ ಸಂಘದ ಅಧ್ಯಕ್ಷ ಪಿ.ತಿಮ್ಮಪ್ಪ, ಕರ್ನಾಟಕ ರಾಜ್ಯದಲ್ಲಿ ಗೊಲ್ಲ ಜನಾಂಗದ ಶಾಸಕರಾಗಿ ಚಿತ್ರದುರ್ಗ ಶಾಸಕಿ ಪೂರ್ಣಿಮಾ ಶ್ರೀನಿವಾಸ ಅವರು ಮಾತ್ರ ಆಯ್ಕೆಯಾಗಿದ್ದಾರೆ. ಹಿಂದುಳಿದ ಜನರ ಅಭಿವೃದ್ಧಿಗಾಗಿ ಪೂರ್ಣಿಮಾ ಶ್ರೀನಿವಾಸ್ ಕೆಲಸ ಮಾಡುತ್ತಾರೆ. ಹಾಗಾಗಿ ಮಂತ್ರಿಮಂಡಲದಲ್ಲಿ ಸಚಿವ ಸ್ಥಾನ ನೀಡಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದರು.