ಬಳ್ಳಾರಿ: ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ನಿಯಂತ್ರಣಕ್ಕೆ ಮುಂದಾಗಿರುವ ಮಹಾನಗರ ಪಾಲಿಕೆ ಆಯುಕ್ತೆ ತುಷಾರಮಣಿ ಹಾಗೂ ಅವರ ನೇತೃತ್ವದ ತಂಡ ನಿನ್ನೆ ನಗರದ ವಿವಿಧ ಅಂಗಡಿಗಳ ಮೇಲೆ ದಿಢೀರ್ ದಾಳಿ ನಡೆಸಿ, ದಂಡ ವಿಧಿಸಿ ಶಾಕ್ ನೀಡಿದೆ.
ನಗರದ ಗ್ರಹಾಂ ರಸ್ತೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ವಸ್ತುಗಳ ಬಳಕೆ ಹಾಗೂ ಮಾರಾಟ ಮಾಡುತ್ತಿದ್ದ ಗುರು ಪ್ಲಾಸ್ಟಿಕ್ ಅಂಗಡಿ ಮೇಲೆ ದಾಳಿ ನಡೆಸಿ, ಪ್ಲಾಸ್ಟಿಕ್ ವಸ್ತುಗಳನ್ನು ವಶಪಡಿಸಿಕೊಂಡು 25 ಸಾವಿರ ರೂ. ದಂಡ ವಿಧಿಸಲಾಗಿದೆ.
ನಗರದಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಇನ್ಮುಂದೆಯೂ ನಿರಂತರ ಕಾರ್ಯಾಚರಣೆ ನಡೆಸಲಾಗುವುದು. ಎಲ್ಲಿಯಾದರೂ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟ ಮಾಡುತ್ತಿರುವುದು ಕಂಡುಬಂದಲ್ಲಿ ಮಹಾನಗರ ಪಾಲಿಕೆಗೆ ಮಾಹಿತಿ ನೀಡಲು ವಿನಂತಿಸಿಕೊಂಡಿರುವ ತುಷಾರಮಣಿ, ಅಂತವರ ಹೆಸರನ್ನು ಗೌಪ್ಯವಾಗಿಡಲಾಗುವುದು ಎಂದು ತಿಳಿಸಿದ್ದಾರೆ.