ಬಳ್ಳಾರಿ: ಜಿಲ್ಲೆಯಲ್ಲಿ ಇಂದು ನಡೆದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ 366 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.
ಜಿಲ್ಲೆಯ 13 ಪರೀಕ್ಷಾ ಕೇಂದ್ರಗಳಲ್ಲಿ ನಡೆದ ದ್ವಿತೀಯ ಪಿಯುಸಿ ಇಂಗ್ಲೀಷ್ ವಿಷಯದ ಪರೀಕ್ಷೆಗೆ 6763 ನೋಂದಾಯಿತ ವಿದ್ಯಾರ್ಥಿಗಳ ಪೈಕಿ 6397 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ನಾಗರಾಜಪ್ಪ ಬಿ. ಆರ್. ಅವರು ತಿಳಿಸಿದ್ದಾರೆ.