ಹೊಸಪೇಟೆ(ವಿಜಯನಗರ) : ವಿದ್ಯಾರ್ಥಿನಿಯನ್ನು ಯುವಕನೊಬ್ಬ ಅಪಹರಿಸಿ ಅತ್ಯಾಚಾರ ಮಾಡಿದ ಘಟನೆ ವಿಜಯನಗರ ಜಿಲ್ಲೆಯ ಕಾನಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ಸಂತೋಷ ಎಂಬಾತ ಅತ್ಯಾಚಾರ ಎಸಗಿದ ಯುವಕ. ವಿದ್ಯಾರ್ಥಿನಿಯನ್ನು ಅಪಹರಿಸಿದ ನಂತರ ಅಜ್ಜಿ ಮನೆಯಲ್ಲಿಟ್ಟು ಬಾಲಕಿಯ ಮೇಲೆ ಅತ್ಯಾಚಾರವೆಸಗಿದ್ದಾನೆ ಎನ್ನಲಾಗ್ತಿದೆ. ಆರೋಪಿ ಕೂಡ್ಲಿಗಿ ಪಟ್ಟಣದವನಾಗಿದ್ದಾನೆ.
ಕಟ್ಟಡ ಕಾರ್ಮಿಕನಾಗಿ ಕೆಲಸ ಮಾಡಲು ಗ್ರಾಮಕ್ಕೆ ಬಂದಿದ್ದ. ಈ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಪರಿಚಯ ಮಾಡಿಕೊಂಡಿದ್ದ. ನಂತರ ವಿದ್ಯಾರ್ಥಿನಿಯೊಂದಿಗೆ ಪ್ರೀತಿಯ ಮೋಹದ ಮಾತುಗಳನ್ನಾಡಿ ಮದುವೆಯಾಗುವುದಾಗಿ ನಂಬಿಸಿದ್ದ.
ಕಳೆದ ನಾಲ್ಕು ದಿನಗಳ ಹಿಂದೆ ಕೊಟ್ಟೂರಿಗೆ ಕಾಲೇಜಿಗೆ ಹೋದಾಗ ವಿದ್ಯಾರ್ಥಿನಿಯನ್ನು ಅಪಹರಿಸಿ ಮಾಡಿ ಹೊಸಪೇಟೆ ಅಜ್ಜಿ ಮನೆಯಲ್ಲಿ ಬಿಟ್ಟಿದ್ದ. ಬಳಿಕ ವಿವಿಧ ಗ್ರಾಮಕ್ಕೆ ಕರೆದುಕೊಂಡು ಹೋಗಿ ನನ್ನ ಮೇಲೆ ಅತ್ಯಾಚಾರ ಮಾಡಿದ್ದಾನೆಂದು ಸಂತ್ರಸ್ತ ವಿದ್ಯಾರ್ಥಿನಿ ದೂರು ನೀಡಿದ್ದಳು.
ದೂರಿನ ಅನ್ವಯ ಗುರುವಾರ ಕಾನಹೊಸಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಸಂತೋಷ ತಲೆಮರೆಸಿಕೊಂಡಿದ್ದಾನೆ. ಆತನ ಪತ್ತೆಗಾಗಿ ಶೋಧ ಕಾರ್ಯ ಮುಂದುವರೆದಿದೆ ಎಂದು ಪಿಎಸ್ಐ ತಿಳಿಸಿದ್ದಾರೆ.
ಇದನ್ನೂ ಓದಿ: ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಗೆ ಮಹಿಳೆಯರ ಬಟ್ಟೆ ತೊಳೆದು, ಇಸ್ತ್ರಿ ಹಾಕುವ ಶಿಕ್ಷೆ ನೀಡಿದ ಕೋರ್ಟ್