ಬಳ್ಳಾರಿ: ಕೊರೊನಾ ವೈರಸ್‌ಗೆ ಕಲಬುರಗಿಯಲ್ಲಿ ವ್ಯಕ್ತಿಯೊಬ್ಬರು ಬಲಿಯಾದ ಬಳಿಕ ಇದೀಗ ಗೌರಿಬಿದನೂರಿನ ವೃದ್ಧ ಮಹಿಳೆ ಪ್ರಾಣ ತೆತ್ತಿದ್ದಾರೆ. ಈ ಮೂಲಕ ಮಾರಣಾಂತಿಕ ಕೊವಿಡ್-19 ರಾಜ್ಯದಲ್ಲಿ ಇಬ್ಬರನ್ನು ಆಹುತಿ ಪಡೆದಿದೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ 52 ಪಾಸಿಟಿವ್ ಕೇಸ್ಗಳು ಪತ್ತೆಯಾಗಿವೆ. ಕಲಬುರಗಿ ಹಾಗೂ ಚಿಕ್ಕಬಳ್ಳಾಪುರದ ಗೌರಿಬಿದನೂರಿನಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ನಿನ್ನೆಯ ದಿನ ಗೌರಿಬಿದನೂರಿನ ಸೋಂಕಿತ ಮಹಿಳೆ (75) ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದರು. ಇಂದು ವರದಿ ಬಂದಿದ್ದು, ಅವರು ಕೊರೊನಾ ವೈರಸ್ನಿಂದಲೇ ಸಾವನ್ನಪ್ಪಿದ್ದಾರೆ ಎಂದು ಸ್ಪಷ್ಟಪಡಿಸಿದರು.
ಈಗಾಗಲೇ ಸರಿಸುಮಾರು 2,400 ಕ್ಕೂ ಅಧಿಕ ಮಂದಿಯ ರಕ್ತದ ಮಾದರಿಯನ್ನು ತಪಾಸಣೆ ಮಾಡಲಾಗಿದ್ದು, ನೆಗೆಟಿವ್ ವರದಿ ಬಂದಿದೆ ಎಂದು ಇದೇ ವೇಳೆ ಸಚಿವರು ಮಾಹಿತಿ ನೀಡಿದ್ರು.