ಬಳ್ಳಾರಿ: ಚಿಹ್ನೆ ಮುದ್ರಣ ದೋಷದಿಂದಾಗಿ ಶಂಕರಬಂಡೆ ಗ್ರಾ.ಪಂ. ವ್ಯಾಪ್ತಿಯ ತೊಲಮಾಮಡಿ ಮತಗಟ್ಟೆಯಲ್ಲಿ ಮತದಾನ ಸ್ಥಗಿತವಾಗಿದೆ.
ಈ ವಿಷಯ ತಿಳಿದ ಬಳಿಕ ಸ್ಥಳಕ್ಕೆ ಜಿಲ್ಲಾ ಚುನಾವಣಾಧಿಕಾರಿ ಎಸ್.ಎಸ್. ನಕುಲ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೈದಲು ಅಡಾವತ್, ಸಹಾಯಕ ಆಯುಕ್ತ ರಮೇಶ ಕೋನರೆಡ್ಡಿ, ತಹಶೀಲ್ದಾರ್ ರೆಹಮಾನ್ ಪಾಶಾ ಅವರು ಭೇಟಿ ನೀಡಿ, ಪರಿಶೀಲಿಸಿದರು.
ಓದಿ:ಕರ್ತವ್ಯನಿರತ ಪೊಲೀಸ್ ಕಾನ್ಸ್ಟೆಬಲ್ಗೆ ಲಘು ಹೃದಯಾಘಾತ: ಆರೋಗ್ಯ ಗಂಭೀರ
ಮುದ್ರಣ ದೋಷದಿಂದಾಗಿ ತೊಲಮಾಮಡಿ ಮತಗಟ್ಟೆಯ ಅಭ್ಯರ್ಥಿ ಪದ್ಮಾವತಿ ಅವರ ಚಿಹ್ನೆ ಮಡಿಕೆಯ ಬದಲಿಗೆ ಸಿಲಿಂಡರ್ ಬಂದಿದೆ. ಈ ಹಿನ್ನೆಲೆ ಮತದಾನ ಸ್ಥಗಿತಗೊಳಿಸಲಾಗಿದ್ದು, ಈ ಕುರಿತು ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಲಾಗಿದೆ. ಗ್ರಾ.ಪಂ. ವ್ಯಾಪ್ತಿಯ ರಿಟರ್ನಿಂಗ್ ಅಧಿಕಾರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಎರಡನೇ ಹಂತದ ಚುನಾವಣೆಯ ದಿನ ಅಥವಾ ಇನ್ನೊಂದು ದಿನ ಈ ಮತಗಟ್ಟೆಯಲ್ಲಿ ಮತದಾನ ನಡೆಸಲಾಗುವುದು ಎಂದು ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ಹೇಳಿದ್ದಾರೆ.