ETV Bharat / city

ವಿಜಯನಗರದಲ್ಲಿ ಪ್ರತ್ಯೇಕ ಎರಡು ಅಪಘಾತ: ಎರಡು ಸಾವು, 8 ಮಂದಿಗೆ ಗಾಯ - ವಿಜಯನಗರದಲ್ಲಿ ಘಟನೆ

ವಿಜಯನಗರ ಜಿಲ್ಲೆಯಲ್ಲಿ ಪ್ರತ್ಯೇಕ ಎರಡು ಕಾರು ಅಪಘಾತ ಸಂಭವಿಸಿದ್ದು, ಇಬ್ಬರು ಸಾವನಪ್ಪಿದ್ದಾರೆ. 8 ಜನಕ್ಕೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

two road accidents in Vijayanagara two death and 8 people Injury
ವಿಜಯನಗರದಲ್ಲಿ ಪ್ರತ್ಯೇಕ ಎರಡು ಅಪಘಾತ
author img

By

Published : May 27, 2022, 9:35 PM IST

ವಿಜಯನಗರ: ಜಿಲ್ಲೆಯಲ್ಲಿ ಪ್ರತ್ಯೇಕ ಎರಡು ಕಾರು ಅಪಘಾತ ಸಂಭವಿಸಿದೆ. ಹೊಸಪೇಟೆ ತಾಲೂಕಿನ ಬೈಲುವದ್ದಿಗೇರಿ ಗ್ರಾಮದ ಹೊರವಲಯದಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯತ್​ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಮತ್ತೊಂದು ಅಪಘಾತ ಕೂಡ್ಲಿಗಿ ತಾಲೂಕಿನ ಅಮ್ಮನಕೆರೆ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಆಗಿದ್ದು, ಕಾರು ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.

ಬಾಲಕಿ ಸಾವು, ಆರು ಜನ ಆಸ್ಪತ್ರಗೆ: ಹೊಸಪೇಟೆಯ ಸಿರಿಸಿನಕಲ್ಲು ಪ್ರದೇಶದಿಂದ ಬಳ್ಳಾರಿಗೆ ಹೊರಟಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ವಾಹನ ಪಲ್ಟಿಯಾಗಿದೆ. ಕಾರಿನಲ್ಲಿದ್ದ ಏಳು ಜನರಲ್ಲಿ, 14 ವರ್ಷದ ಬಾಲಕಿ ರೋಷಿಣಿ ಸಾವನ್ನಪ್ಪಿದ್ದು, ಚಾಲಕ ಸೇರಿದಂತೆ 6 ಜನರು ಗಾಯಗೊಂಡಿದ್ದಾರೆ. ಹೊಸಪೇಟೆಯ ಪ್ರಕಾಶ್ ಮೆಹರವಾಡೆ ಎಂಬುವವರು ತಮ್ಮ ಖಾಸಗಿ ಕಾರ್​ನಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಹೊಸಪೇಟೆಯ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನಿಯಂತ್ರಣ ತಪ್ಪಿ ಮಗುಚಿಬಿದ್ದ ಕಾರು​: ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಅಮ್ಮನಕೆರೆ ಕ್ರಾಸ್ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಕಾರು ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಕಾರಿನಲ್ಲಿದ್ದ ವಿರುಪಾಪುರ ಗ್ರಾಮದ ಮಾರಪ್ಪ (62) ಎಂಬುವರು ಸಾವನ್ನಪ್ಪಿದ್ದು, ಪತ್ನಿ ಹಾಗೂ ಮಗನಿಗೆ ಗಂಭೀರ ಗಾಯಗಳಾಗಿವೆ. ಗಾಯಳುಗಳಿಗೆ ಕೂಡ್ಲಿಗಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಕೂಡ್ಲಿಗಿ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ: ಹೃದಯ ವಿದ್ರಾವಕ ವಿಡಿಯೋ: ಆಟವಾಡ್ತಿದ್ದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.