ಬಳ್ಳಾರಿ: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಅವಿರತವಾಗಿ ಶ್ರಮಿಸಿದ ಕೊರೊನಾ ವಾರಿಯರ್ಸ್ಗೆ ಕೋವಿಶಿಲ್ಡ್ ಲಸಿಕೆಯನ್ನ ಹಾಕಲು ಮೊದಲು ಆದ್ಯತೆ ನೀಡಲಿ. ಆ ಮೇಲೆ ಈ ಲಸಿಕೆಯನ್ನು ನಮಗೆ ಹಾಕಲಿ ಎಂದು ಶಾಸಕ ಗಾಲಿ ಸೋಮಶೇಖರ ರೆಡ್ಡಿ ಹೇಳಿದರು.
ಜಿಲ್ಲಾಸ್ಪತ್ರೆ ಆವರಣದ ಪ್ರಾಥಮಿಕ ಆರೋಗ್ಯ ಪರೀಕ್ಷಾ ಕೇಂದ್ರದಲ್ಲಿ ನಡೆದ ಕೋವಿಶಿಲ್ಡ್ ಲಸಿಕೆ ಅಭಿಯಾನ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮೊದಲು ಕೊರೊನಾ ವಾರಿಯರ್ಸ್ಗೆ ಲಸಿಕೆ ಹಾಕಬೇಕು. ಆ ಮೇಲೆ ನಮಗೆ ಹಾಕಲಿ. ಯಾಕಂದ್ರೆ, ಅವರೆಲ್ಲರೂ ಮಹಾಮಾರಿ ಕೊರೊನಾ ತಡೆಗಟ್ಟಲು ಶ್ರಮವಹಿಸಿದ್ದಾರೆ. ಹೀಗಾಗಿ, ಮೊದಲು ಅವರಿಗೆ ಲಸಿಕೆ ನೀಡಬೇಕು ಎಂದು ತಿಳಿಸಿದರು.