ಹೊಸಪೇಟೆ : ವಿಜಯನಗರ ಜಿಲ್ಲೆಯಾಗುತ್ತದೆ, ಅದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ ಆನಂದ ಸಿಂಗ್ ತಿಳಿಸಿದ್ರು.
ನಗರದ ತಾಲೂಕು ಕ್ರೀಡಾಂಗಣದಲ್ಲಿ ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ ಜಿಲ್ಲಾ ಮಟ್ಟದ ಯುವ ಜನ ಮೇಳ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಿ ಮಾತನಾಡಿದ ಅವರು, ವಿಜಯ ನಗರ ಜಿಲ್ಲೆಯಾಗುತ್ತೆ. ಅದನ್ನು ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ. ಮುಖ್ಯಮಂತ್ರಿಗಳು ಸಹ ವಿಜಯನಗರವನ್ನು ಜಿಲ್ಲೆ ಮಾಡಲು ತಯಾರಿ ನಡಿಸಿದ್ದಾರೆ. ಹಂಪಿ ಉತ್ಸವದಲ್ಲಿ ಮುಖ್ಯಮಂತ್ರಿಗಳ ಸಮ್ಮುಖದಲ್ಲಿ ಜಿಲ್ಲೆಯ ಎಲ್ಲಾ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆ ಘೋಷಣೆ ಮಾಡುತ್ತಾರೆ ಎಂದರು.