ವಿಜಯನಗರ: ಅಕ್ರಮಕ್ಕೆ ಕುಮ್ಮಕ್ಕು, ಮೇಲಧಿಕಾರಿಗಳ ಜೊತೆ ಅನುಚಿತ ವರ್ತನೆ ಆರೋಪದ ಮೇರೆಗೆ ಪೊಲೀಸ್ ಕಾನ್ಸ್ಟೇಬಲ್ ಕೊಟ್ರಗೌಡ ಎಂಬುವವರನ್ನು ಅಮಾನತು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್.ಕೆ ಆದೇಶ ಹೊರಡಿಸಿದ್ದಾರೆ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಕೊಟ್ರಗೌಡ ಕಾರ್ಯನಿರ್ವಹಿಸುತ್ತಿದ್ದರು.
ಅಕ್ರಮ ಮರಳು ಸಾಗಾಟ ಮಾಡುವವರ ಮೇಲೆ ನಿಗಾ ವಹಿಸುವಂತೆ ಸೂಚನೆ ನೀಡಿದರೂ ಪಾಲನೆ ಮಾಡಿಲ್ಲ ಹಾಗೂ ವರ್ಗಾವಣೆ ಮಾಡಿಸುತ್ತೇನೆ ಎಂದು ಪಿಎಸ್ಐಗೆ ಧಮ್ಕಿ ಹಾಕಿದ್ದಾರೆ ಎಂಬ ಆರೋಪದ ಮೇಲೆ ಅಮಾನತು ಮಾಡಲಾಗಿದೆ ಎಂದು ವಿಜಯನಗರ ಎಸ್ಪಿ ಡಾ. ಅರುಣ್. ಕೆ ತಿಳಿಸಿದ್ದಾರೆ.