ಹೊಸಪೇಟೆ (ವಿಜಯನಗರ) : ಹೊಲದಲ್ಲಿ ಕೆಲಸ ಮಾಡುವ ವೇಳೆಯಲ್ಲಿ ಹಾವು ಕಚ್ಚಿ ರೈತ ಮಹಿಳೆಯೊಬ್ಬರು ಮೃತಪಟ್ಟ ಘಟನೆ ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಚನ್ನಹಳ್ಳಿ ತಾಂಡದಲ್ಲಿ ಇಂದು ಮಧ್ಯಾಹ್ನ ನಡೆದಿದೆ.
ಚನ್ನಹಳ್ಳಿ ತಾಂಡದ ಸೋಮ್ಲಿಬಾಯಿ (52) ಮೃತ ರೈತ ಮಹಿಳೆ. ತಮ್ಮ ಹೊಲದಲ್ಲಿ ಮೆಕ್ಕೆಜೋಳ ಸೂಲಂಗಿ ಕಟಾವು ಮಾಡುವಾಗ ಕೈಗೆ ಹಾವು ಕಚ್ಚಿದೆ. ಬಳಿಕ ಹರಪನಹಳ್ಳಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆಸ್ಪತ್ರೆ ದಾಖಲಿಸುವ ಮಾರ್ಗ ಮಧ್ಯೆ ಮಹಿಳೆ ಮೃತಪಟ್ಟಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ಮೃತ ಸೋಮ್ಲಿಬಾಯಿಗೆ ನಾಲ್ಕು ಜನ ಗಂಡು ಮಕ್ಕಳು ಹಾಗೂ ಒಬ್ಬ ಪುತ್ರಿ ಇದ್ದಾರೆ. ಈ ಸಂಬಂಧ ಹರಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.