ETV Bharat / city

ಬಸ್ ಬಾಗಿಲ ಬಳಿ ನಿಂತು ಪ್ರಯಾಣ: ಆಯತಪ್ಪಿ ಬಿದ್ದು ಮಹಿಳೆ ಸಾವು - ವೇಣಿ ವೀರಾಪುರ

ಬಳ್ಳಾರಿಯಿಂದ ಹೊಸಪೇಟೆ ಕಡೆ ತೆರಳುತ್ತಿದ್ದ ಸಾರಿಗೆ ಬಸ್​​ನಿಂದ ಕೆಳಗೆ ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ.

Woman dies after fall from moving bus in Bellary
ಸಾರಿಗೆ ಬಸ್
author img

By

Published : Aug 5, 2022, 7:31 AM IST

ಬಳ್ಳಾರಿ: ಚಲಿಸುತ್ತಿದ್ದ ಸಾರಿಗೆ ಬಸ್‌ನಿಂದ ಬಿದ್ದು ಮಹಿಳೆ ಸಾವನಪ್ಪಿರುವ ಘಟನೆ ತಾಲೂಕಿನ ವೇಣಿ ವೀರಾಪುರದ ಹೆದ್ದಾರಿಯಲ್ಲಿ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಮಹಿಳೆ ಬಾಗಿಲು ಬಳಿ ನಿಂತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಅವಘಡ ಸಂಭವಿಸಿದೆ ಎನ್ನಲಾಗ್ತಿದೆ.

ಬಳ್ಳಾರಿಯಿಂದ ಹೊಸಪೇಟೆಗೆ ತೆರಳುತ್ತಿದ್ದKA 34, F-1228 ನಂಬರ್‌ನ ಸಾರಿಗೆ ಬಸ್​​ನಲ್ಲಿ ಮಹಿಳೆ ಪ್ರಯಾಣಿಸುತ್ತಿದ್ದರು. ಬಸ್ ಚಲಿಸುತ್ತಿರುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕುಡುತಿನಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: ಕಳ್ಳತನಕ್ಕೆ ಯತ್ನ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್​​ ಕಾನ್ಸ್​​ಟೇಬಲ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.