ಬಳ್ಳಾರಿ: ನಗರದ ರಾಯಲ್ ವೃತ್ತದಲ್ಲಿ ಇಂದು ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಮತ್ತು ಮಹಿಳೆಯರ ಶೋಷಣೆ ವಿರುದ್ಧ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರನಾಥ್ ನೇತೃತ್ವದಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ನಂತರ ಜಿಲ್ಲಾಧಿಕಾರಿ ಕಚೇರಿಗೆ ಹೋಗಿ ಮನವಿ ಪತ್ರ ಸಲ್ಲಿಸಿದರು.
ಬೆಳಗ್ಗೆ 11 ಗಂಟೆಗೆ ಪ್ರತಿಭಟನೆ ಎಂದು ಮಾಧ್ಯಮದವರಿಗೆ ಮಾಹಿತಿ ನೀಡಿದ್ದು, 12 ಗಂಟೆ 30 ನಿಮಿಷಕ್ಕೆ ಪ್ರತಿಭಟನೆ ಆರಂಭಿಸಿದ್ದಾರೆ. ಬಳ್ಳಾರಿ ಕಾಂಗ್ರೆಸ್ ಪಕ್ಷದಲ್ಲಿ ಅನೇಕ ಮಹಿಳಾ ಮುಖಂಡರು, ಸದಸ್ಯರು ಗೈರಾಗಿದ್ದರು. ರಾಜ್ಯಾಧ್ಯಕ್ಷೆ ಬಂದು ಬಳ್ಳಾರಿಯಲ್ಲಿ ಪ್ರತಿಭಟನೆಯಲ್ಲಿ ಭಾಗಿಯಾದರೂ ಅನೇಕರು ಮುನಿಸಿಕೊಂಡು ಮನೆಯಲ್ಲೇ ಇದ್ದಾರೆ ಎನ್ನಲಾಗಿದೆ.