ಬಳ್ಳಾರಿ: ಜೀವನದಲ್ಲಿ ಜುಗುಪ್ಸೆಗೊಂಡು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಗುಗ್ಗರಹಟ್ಟಿ ಪ್ರದೇಶದಲ್ಲಿ ನಡೆದಿದೆ.
ಆಫ್ರೀನ್ (17) ಆತ್ಮಹತ್ಯೆ ಮಾಡಿಕೊಂಡ ಯುವತಿ ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಂದೆ-ತಾಯಿ ಕೆಲಸಕ್ಕೆ ಹೋಗಿದ್ದರು ಎಂದು ತಿಳಿದು ಬಂದಿದೆ. ಈ ಸಂಬಂಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.